ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಕಂಬ ಸರಿಪಡಿಸಿದ ಜೆಸ್ಕಾಂ ಸಿಬ್ಬಂದಿ

Last Updated 8 ಮೇ 2022, 12:13 IST
ಅಕ್ಷರ ಗಾತ್ರ

ಖಟಕಚಿಂಚೋಳಿ: ಸಮೀಪದ ಡಾವರಗಾಂವ್ ಗ್ರಾಮದಲ್ಲಿ ಬಾಗಿದ ವಿದ್ಯುತ್‌ ಕಂಬವನ್ನು ಜೆಸ್ಕಾಂ ಸಿಬ್ಬಂದಿ ಸರಿಪಡಿಸಿದರು.

‘ಜೋತು ಬಿದ್ದ ವಿದ್ಯುತ್ ತಂತಿ; ಆತಂಕ’ ಶೀರ್ಷಿಕೆಯಡಿಯಲ್ಲಿ ‘ಪ್ರಜಾವಾಣಿ’ಯ ಮೇ 8ರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ವರದಿಗೆ ತಕ್ಷಣ ಸ್ಪಂದಿಸಿದ ಜೆಸ್ಕಾಂ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಬಾಗಿದ ಕಂಬವನ್ನು ಸರಿಪಡಿಸಿ ಹೊಸ ತಂತಿ ಅಳವಡಿಸಿದರು.

ವರದಿಯ ಹಿನ್ನೆಲೆಯಲ್ಲಿ ಜೆಸ್ಕಾಂ ಸಿಬ್ಬಂದಿ ಹೊಲಕ್ಕೆ ತೆರಳಿ ಪರಿಶೀಲನೆ ನಡೆಸಿದರು. ನೆಲದಿಂದ ಮೂರು ಅಡಿ ಅಂತರದಲ್ಲಿ ಬಾಗಿದ ಕಂಬವನ್ನು ನೇರವಾಗಿ ನಿಲ್ಲಿಸಿ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.

ಪ್ರಜಾವಾಣಿ ವರದಿಯಿಂದ ರೈತರು ನಿರಾತಂಕವಾಗಿ ಕೃಷಿ ಚಟುವಟಿಕೆಗಳನ್ನು ಮಾಡುವಂತಾಗಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT