ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುಲಸೂರ | ವಿದ್ಯುತ್ ಸ್ಪರ್ಶ: ಯುವಕ ಸಾವು

Published : 23 ಸೆಪ್ಟೆಂಬರ್ 2024, 15:32 IST
Last Updated : 23 ಸೆಪ್ಟೆಂಬರ್ 2024, 15:32 IST
ಫಾಲೋ ಮಾಡಿ
Comments

ಹುಲಸೂರ: ಪಟ್ಟಣದ ವಾರ್ಡ್‌ ಸಂಖ್ಯೆ 3ರ ನಿವಾಸಿ ಮುಜಾಯಿದ್‌ ಅಬ್ದುಲ್‌ಲತೀಫ್ (36) ಅವರು ವಿದ್ಯುತ್ ತಂತಿ ಸ್ಪರ್ಶಿಸಿ ಸೋಮವಾರ ಮೃತಪಟ್ಟಿದ್ದಾರೆ.

ತಮ್ಮ ಮನೆಯ ಬಳಿ ತಗಡಿನ ಶೆಡ್‌ ಕೆಲಸ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಬಸವಕಲ್ಯಾಣ ತಾಲ್ಲೂಕ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಜೆಸ್ಕಾಂ ಇಲಾಖೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಸೂಕ್ತ ವರದಿಯನ್ನು ಸರ್ಕಾರಕ್ಕೆ ನೀಡಲಾಗುವುದು ಎಂದು ಜೆಸ್ಕಾಂ ಇಲಾಖೆಯ ಎಇಇ ಗಣಪತಿ ಮೈನಾಳೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT