ಸೋಮವಾರ, ಜನವರಿ 17, 2022
21 °C

ಬೀದರ್: ಸಾವಿತ್ರಿಬಾಯಿ ಫುಲೆ ಆದರ್ಶ ಅಳವಡಿಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಣದೂರವಾಡಿ (ಜನವಾಡ): ‘ದೇಶದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಆದರ್ಶ ಅಳವಡಿಸಿಕೊಂಡು ಇಂದಿನ ಮಕ್ಕಳಿಗೆ ಶಿಕ್ಷಣ ನೀಡಬೇಕಾಗಿದೆ’ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಂಬಾದಾಸ್ ಜಾಲಿ ಹೇಳಿದರು.

ಬೀದರ್‌ ತಾಲ್ಲೂಕಿನ ಆಣದೂರವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೀರ್ತಿ ಎನ್.ಜಿ.ಒ. ಎಜುಕೇಶನ್ ಹಾಗೂ ಗ್ರಾಮೀಣ ಅಭಿವೃದ್ದಿ ಸಂಸ್ಥೆ ಹಾಗೂ ಅಂಬಿಗರ ಚೌಡಯ್ಯ ಯುವ ಸೇನೆ ಆಶ್ರಯದಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ ಅಂಗವಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಕರ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಜಿಲ್ಲಾ ಘಟಕ ಅಧ್ಯಕ್ಷ ಸಂಜೀವಕುಮಾರ ಅತಿವಾಳೆ ಮಾತನಾಡಿ, ಸಮಾಜ ಸುಧಾರಕ ಮಹಾತ್ಮ ಫುಲೆ ಹಾಗೂ ಪತ್ನಿ ಜ್ಯೋತಿಬಾ ಫುಲೆ ಅವರ ಸಾಮಾಜಿಕ ಕಾರ್ಯ ಇಂದಿನ ಯುವ ಪೀಳಿಗೆಗೆ ಪ್ರೇರಣೆಯಾಗಿದೆ’ ಎಂದರು.

ಮುಖ್ಯಶಿಕ್ಷಕಿ ಪುಷ್ಪಾ ಕನಕ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಾಗಶೆಟ್ಟಿ ಧರಮಪೂರ ಜಾನಪದ ಗೀತೆಗಳನ್ನು ಹಾಡಿದರು.

ಅಂಬಿಗರ ಚೌಡಯ್ಯ ಯುವ ಸೇನೆ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ, ಚಂದ್ರಕಾಂತ ಹಳ್ಳಿಖೇಡಕರ್, ಕೀರ್ತಿ ಎನ್.ಜಿ.ಒ. ಎಜುಕೇಶನ್ ಮತ್ತು ಗ್ರಾಮೀಣ ಅಭಿವೃದ್ದಿ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಅಷ್ಟೂರೆ, ಗೋವಿಂದ ಜಾಲಿ, ­­ಶಿಕ್ಷಕ ಸಂಜಯ ಸೂರ್ಯವಂಶಿ, ರೇಣುಕಾ ಸುತಾರ, ಪುಷ್ಪಾ ಹತ್ತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.