ಗುರುವಾರ , ಮೇ 6, 2021
23 °C
ಪ್ರತಿದಿನ ಹೆಚ್ಚುತ್ತಿರುವ ಕೋವಿಡ್‌–19 ಪ್ರಕರಣಗಳು

ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್‌ ಪ್ರಕರಣಗಳು ಹೆಚ್ಚಾಗಿ ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ತೀವ್ರ ಟೀಕೆಗಳು ವ್ಯಕ್ತ ಆಗುತ್ತಿರುವುದರಿಂದ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಹೀರಾ ನಸೀಮ್ ಮಂಗಳವಾರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಸಿದರು.

ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕೆ ವಿವಿಧ ಇಲಾಖೆಗಳು ಏನು ಮಾಡಬಹುದು ಎನ್ನುವುದರ ಕುರಿತು
ಅಧಿಕಾರಿಗಳಿಂದ ಸಲಹೆ ಪಡೆಯಲಾಯಿತು. ಕೋವಿಡ್ ವಾರ್ಡ್ ಸೇರಲು ಹಿಂಜರಿಯುತ್ತಿದ್ದ ಜನರು ಇದೀಗ ಕೋವಿಡ್ ಪಾಸಿಟಿವ್ ವರದಿ ಬಂದ ಮೇಲೆ ಆಸ್ಪತ್ರೆಗೆ ಬರುತ್ತಿರುವುದನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಕೋವಿಡ್ ಸೋಂಕಿತರ ದಾಖಲಾತಿಗೆ ತಕ್ಕಂತೆ ಪ್ರತಿ ದಿನ ಬೇರೆ ಬೇರೆ ಕಡೆಗಳಲ್ಲಿ ಹಾಸಿಗೆ ವ್ಯವಸ್ಥೆ ಮಾಡಲು, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ರೋಗಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸುವ
ಕುರಿತು ಚರ್ಚೆ ನಡೆಸಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿಕೊಡಲಾಯಿತು.

ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವಸತಿ ನಿಲಯಗಳಲ್ಲಿ, ನೆಹರೂ ಕ್ರೀಡಾಂಗಣದಲ್ಲಿನ ಕ್ರೀಡಾ ವಸತಿ ನಿಲಯದಲ್ಲಿ ಕೋವಿಡ್ ಕೇರ್‌ ಸೆಂಟರ್ ಸ್ಥಾಪನೆ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಜಿಲ್ಲಾಧಿಕಾರಿ ಮಾತನಾಡಿ, ಆಕ್ಸಿಜನ್ ಪೂರೈಕೆ, ಚಿಕಿತ್ಸೆ ಸೇರಿದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಇಲಾಖೆಗಳ ಸಹಕಾರೊಂದಿಗೆ ಭಗೀರಥ ಪ್ರಯತ್ನ ಮಾಡುತ್ತಿದೆ. ಮಾಸ್ಕ್ ಬಳಕೆ, ಕೋವಿಡ್ ನಿಯಮ ಪಾಲನೆಗೆ ನಿರಂತರ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮುಂಜಾಗ್ರತೆ ವಹಿಸದ ಹಾಗೂ ಸಾಕಷ್ಟು ವಿಳಂಬವಾಗಿ ಆಸ್ಪತ್ರೆಗೆ ದಾಖಲು ಮಾಡುವ ಕಾರಣ ಚಿಕಿತ್ಸೆ ಫಲಿಸದೇ ಕೆಲವರು ಸಾವಿಗೀಡಾ ಗುತ್ತಿದ್ದಾರೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ.ಬ್ಯಾಕೋಡ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು