ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಸಲ್ ಬಿಮಾ ಯೋಜನೆ ಅನುಷ್ಠಾನಕ್ಕೆ ಒತ್ತು ಕೊಡಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೂಚನೆ
Last Updated 6 ನವೆಂಬರ್ 2020, 13:51 IST
ಅಕ್ಷರ ಗಾತ್ರ

ಬೀದರ್: 2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆ ಕುರಿತು ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕೈಗೊಂಡು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸುವಂತೆ ನೋಡಿಕೊಳ್ಳಬೇಕು. ಬೆಳೆ ವಿಮೆ ಮಾಡಿಸಲು ಬ್ಯಾಂಕ್‍ಗಳಿಗೆ ಬರುವ ರೈತರಿಗೆ ವಿನಾಕಾರಣ ತೊಂದರೆ ಕೊಡಬಾರದು ಎಂದು ಹೇಳಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್ ಅವರು, ವಿಮೆ ಮಾಡಿಸಬಹುದಾದ ಬೆಳೆಗಳು, ಕೊನೆಯ ದಿನಾಂಕದ ಮಾಹಿತಿ ನೀಡಿದರು.

ಕಿರು ಮಾಹಿತಿ ಪುಸ್ತಕ ಬಿಡುಗಡೆ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ 2020-21ರ ಹಿಂಗಾರು ಕುರಿತ ಮಾಹಿತಿ ಪುಸ್ತಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಕೃಷಿ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ ಬಿರಾದಾರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುವರ್ಣ, ತೋಟಗಾರಿಕೆ ಇಲಾಖೆಯ ಅಧಿಕಾರಿ ಶ್ರೀಮಂತ ಬಿರಾದಾರ, ಡಿಸಿಸಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಹಾಜನ್ ಮಲ್ಲಿಕಾರ್ಜುನ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಮ್.ಕಮತಗಿ, ಕೃಷಿ ಅಧಿಕಾರಿ ರಾಜಕುಮಾರ ಎಕ್ಕೇಲಿ, ಯುಎಸ್‍ಜಿಐಸಿನ ಜಿಲ್ಲಾ ಸಂಯೋಜಕ ವಿನಯಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT