ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಡಿ: ಸಂಸದ ಭಗವಂತ ಖೂಬಾ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಭಗವಂತ ಖೂಬಾ ಸೂಚನೆ
Last Updated 1 ಜನವರಿ 2021, 16:30 IST
ಅಕ್ಷರ ಗಾತ್ರ

ಬೀದರ್: ಸರ್ವ ಶಿಕ್ಷಣ ಅಭಿಯಾನ, ಸ್ವಚ್ಛ ಭಾರತ ಮಿಷನ್, ನರೇಗಾ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಮಧ್ಯಾಹ್ನ ಬಿಸಿಯೂಟ, ರಾಷ್ಟ್ರೀಯ ಕೃಷಿ ವಿಕಾಸ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಸಂಸದ ಭಗವಂತ ಖೂಬಾ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೇಂದ್ರ ಪುರಸ್ಕøತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಕುರಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಒಟ್ಟು 18 ಲಕ್ಷ ಜನರ ಪೈಕಿ ಅರ್ಹ ಎಲ್ಲರಿಗೂ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಸಿಗುವಂತಾಗಬೇಕು. ಈ ವಿಷಯದಲ್ಲಿ ವಿಳಂಬ ಮಾಡಬಾರದು ಎಂದು ತಿಳಿಸಿದರು.

ಈವರೆಗೆ 4,17,000 ಕಾರ್ಡ್ಗಂಳನ್ನು ನೀಡಲಾಗಿದ್ದು, ಬಾಕಿ ಉಳಿದ ಅರ್ಹರಿಗೆ ಕೂಡಲೇ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ 185 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯಕ್ರಮಗಳನ್ನು ಏರ್ಪಡಿಸಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ಗ್ರಾಮಸ್ಥರಲ್ಲಿ ಅರಿವು ಮೂಡಿಸಿ, ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ವಿತರಣೆಯ ನಿಗದಿತ ಗುರಿ ಸಾಧಿಸಬೇಕು ಎಂದು ತಿಳಿಸಿದರು.

15 ದಿನಗಳ ಗಡುವು: ಜಿಲ್ಲೆಯಲ್ಲಿ ಲಿಂಗಾನುಪಾತದ ಬಗ್ಗೆ ಗಮನ ಹರಿಸಬೇಕು. ಹೆಣ್ಣು ಭ್ರೂಣ ಹತ್ಯೆ ತಡೆಗೆ ಕ್ರಮ ವಹಿಸಬೇಕು. ಕಾನೂನು ಬಾಹೀರ ಚಟುವಟಿಕೆಗಳನ್ನು ನಡೆಸುವ ಸ್ಕ್ಯಾನಿಂಗ್ ಸೆಂಟರ್ಗ್ಳ ಮೇಲೆ ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಬೇಕು. ಕೈಗೊಂಡ ಕ್ರಮದ ಬಗ್ಗೆ 15 ದಿನದೊಳಗೆ ವರದಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಖೂಬಾ ಸೂಚಿಸಿದರು.

ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪರಿಹಾರ ಧನ ಕಲ್ಪಿಸಬೇಕು. ತೊಗರಿ, ಕಡಲೆ, ಜೋಳದ ಫಸಲಿನ ರೋಗಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು ಎಂದು ಎಂದು ತಿಳಿಸಿದರು.

6 ರಿಂದ 10ನೇ ತರಗತಿಯ ವರೆಗೆ ವಿದ್ಯಾಗಮ ಯೋಜನೆಯು ಪುಃನಾರಂಭವಾಗಿದೆ. ಮಾಸ್ಕ್ ಧರಿಸುವುದು, ಆರೋಗ್ಯ ತಪಾಸಣೆ ಸೇರಿದಂತೆ ಕೋವಿಡ್-19ರ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯಾ ವಿಕಾಸ ಯೋಜನೆಯಡಿ ಶಾಲಾ ಮಕ್ಕಳಿಗೆ ವಿತರಿಸಲು ಬಟ್ಟೆ ಬಂದಿದ್ದು, ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದರು.

ಕೋವಿಡ್ 19 ಪ್ರಯುಕ್ತ ನಿಂತು ಹೋಗಿದ್ದ ಕೆಲ ಚಟುವಟಿಕೆಗಳನ್ನು ಪುನಾರಂಭಿಸಬೇಕು. ಪೋಷಣಾ ಅಭಿಯಾನ ಯೋಜನೆಯಡಿ ಸಮುದಾಯ ಆಧಾರಿತ ಚಟುವಟಿಕೆಗಳನ್ನು ಕೂಡಲೇ ಆರಂಭಿಸಬೇಕು ಎಂದು ಸಂಸದರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಅಧಿಕಾರಿಗಳು ಕಾಲಮಿತಿಯೊಳಗೆ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿಗಳಿಗೆ ವೈಫೈ ಸಂಪರ್ಕ ಒದಗಿಸುವ ಪ್ರಕ್ರಿಯೆಯು ತ್ವರಿತಗತಿಯಲ್ಲಿ ನಡೆಯಬೇಕು ಎಂದು ಬಿಎಸ್ಎಂನ್ಎ ಲ್ ಅಧಿಕಾರಿಗಳಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ವೈಜಿನಾಥ ಮಾನೆಗೋಪಾಳೆ, ಉಪಾಧ್ಯಕ್ಷ ವಿಜಯಕುಮಾರ ಅಣೆಪ್ಪ ಪಾಟೀಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್,

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬಸವಕಲ್ಯಾಣ, ಬೀದರ್ ಉಪ ವಿಭಾಗಾಧಿಕಾರಿಗಳಾದ ಭುವನೇಶ ಪಾಟೀಲ, ಗರಿಮಾ ಪನ್ವಾರ್, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ ಎಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT