ಮಂಗಳವಾರ, ಫೆಬ್ರವರಿ 7, 2023
26 °C

ಗ್ರಾಮ ಅಭಿವೃದ್ಧಿಗೆ ಒತ್ತು ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

ಅಷ್ಟೂರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರೇಣುಕಾ ಮೋರೆ ಹಾಗೂ ಉಪಾಧ್ಯಕ್ಷೆ ಪ್ರೇಮಲಾ ತಾದಲಾಪುರೆ ಅವರನ್ನು ನಗರದ ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ಆಯ್ಕೆಗೊಳಿಸಿದ ಜನರ ಆಶಯಗಳನ್ನು ಈಡೇರಿಸಲು ಶ್ರಮಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮಲಾ ತಾದಲಾಪುರ, ಸದಸ್ಯರಾದ ಕುಶಾಲರಾವ್ ಅಷ್ಟೂರ, ಕಸ್ತೂರಿಬಾಯಿ, ಸಂಜುಕುಮಾರ, ರಾಹುಲ್ ತಾದಲಾಪುರ, ಶಿವಾನಂದ ತಾದಲಾಪುರ, ಕಾಶೀನಾಥ ವಾಲ್ದೊಡ್ಡಿ, ಸಂಗಶೆಟ್ಟಿ ರಾಮತೀರ್ಥ, ಸಂಗಾರೆಡ್ಡಿ, ಶಂಕ್ರಮ್ಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.