ಬೀದರ್: ಕೋವಿಡ್ ಸೋಂಕಿನಿಂದ ಮೃತಪಟ್ಟ ಇಲ್ಲಿಯ ಬ್ರಿಮ್ಸ್ ಕಾಲೇಜಿನಲ್ಲಿ ಡಿ ದರ್ಜೆ ಹುದ್ದೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗುಂಪಾದ ಲಕ್ಷ್ಮೀನಗರದ ಪ್ರದೀಪ ವಿಶ್ವನಾಥ ಅವರ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ಒದಗಿಸಬೇಕು ಎಂದು ವಿವಿಧ ಸಂಘ, ಸಂಸ್ಥೆಗಳು ಆಗ್ರಹಿಸಿವೆ.

ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದೊದ್ದೇಶ ಸಹಕಾರ ಸಂಘದ ನಿರ್ದೇಶಕ ರಮೇಶ ಪಾಸ್ವಾನ್, ವಿಶ್ವ ಕನ್ನಡಿಗರ ಸಂಸ್ಥೆಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಂಬಾದಾಸ ಗಾಯಕವಾಡ ಮಾತನಾಡಿ, ಬ್ರಿಮ್ಸ್ ಹಾಗೂ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗ್ರುಪ್ ಡಿ ಹುದ್ದೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ 200ಕ್ಕೂ ಹೆಚ್ಚು ನೌಕರರಿಗೆ ಸೇವಾ ಭದ್ರತೆ ಕಲ್ಪಿಸಬೇಕು. ಸೇವೆಯ ವೇಳೆ ಆಕಸ್ಮಿಕವಾಗಿ ಮೃತಪಟ್ಟರೆ ಅವರ ಕುಟುಂಬ ವರ್ಗದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.