ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಲ್ಲಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

ಸರ್ಕಾರಿ ನೌಕರರ ಭವನದಲ್ಲಿ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Last Updated 31 ಜನವರಿ 2021, 4:04 IST
ಅಕ್ಷರ ಗಾತ್ರ

ಬೀದರ್: ಬೀದರ್‌ನಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಆಯೋಜಿಸಲಾಗುವುದು. ಉದ್ಘಾಟನೆಗೆ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಹೇಳಿದರು.

ಇಲ್ಲಿನ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಜಿಲ್ಲಾ ಪ್ರಾಚಾರ್ಯರು ಹಾಗೂ ಉಪನ್ಯಾಸಕರ ಸಂಘದ ವತಿಯಿಂದ ಆಯೋಜಿಸಿದ್ದ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಹಾಗೂ ಕ್ಯಾಲೆಂಡರ್ ಬಿಡು ಗಡೆ ಸಮಾರಂಭದಲ್ಲಿ ಮಾತನಾಡಿದರು.

ಅನುದಾನಿತ ಸಿಬ್ಬಂದಿಗೂ ಸರ್ಕಾರದ ಆರೋಗ್ಯ ಸೌಲಭ್ಯ ಕಲ್ಪಿಸಲು ಹಾಗೂ ಕೆಜಿಐಡಿ ಇಲಾಖೆಯಲ್ಲಿ ಸುಧಾರಣೆ ತರಲು ಪ್ರಯತ್ನಿಸಲಾಗು ವುದು. ಸರ್ಕಾರಿ ನೌಕರರ ಕಲ್ಯಾಣ ಕಾರ್ಯಗಳಿಗೆ ಅತ್ಯಂತ ಕಡಿಮೆ ದರದಲ್ಲಿ ನೌಕರರ ಭವನವನ್ನು ಒದಗಿ ಸಲಾಗುವುದು ಎಂದು ತಿಳಿಸಿದರು.

ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಸರ್ಕಾರ ನೌಕರರಿಗೆ ಸಕಲ ಸೌಕರ್ಯಗಳನ್ನು ಕೊಟ್ಟಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಓಂಕಾರ ಸೂರ್ಯವಂಶಿ ಮಾತನಾಡಿ, 2008ರಿಂದ ನೇಮಕಗೊಂಡ ಅನುದಾನಿತ ಶಾಲಾ, ಕಾಲೇಜುಗಳ ಸಿಬ್ಬಂದಿಗೂ ವಿಶ್ರಾಂತಿ ವೇತನ ಹಾಗೂ ಆರೋಗ್ಯ ಸಂಜೀವಿನಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಎಲ್ಲರೂ ಪ್ರಯತ್ನಪಟ್ಟರೆ ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ವೃದ್ಧಿಸುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ತಿಳಿಸಿದರು.

ಪ್ರಾಚಾರ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತರಾವ್ ಮೈಲಾರೆ ಮಾತನಾಡಿದರು. ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳು, ಆಡಳಿತ ಮಂಡಳಿ ಪ್ರಮುಖರು ಹಾಗೂ ನೂತನ ಪ್ರಾಚಾರ್ಯರನ್ನು ಸನ್ಮಾನಿಸಲಾಯಿತು.

ಪ್ರಾಚಾರ್ಯರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಠ್ಠಲದಾಸ ಪ್ಯಾಗೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಪ್ರಾಚಾರ್ಯರಾದ ಚಂದ್ರಕಾಂತ ಗಂಗಶೆಟ್ಟಿ, ಪ್ರಭು ಎಸ್, ಸುರೇಶ ಅಕ್ಕಣ್ಣ, ಮನ್ಮಥ ಡೋಳೆ, ಶಿವಕುಮಾರ ರಾಜನಾಳೆ, ಪಿ.ಆರ್. ಹುಗ್ಗಿ, ಡಾ. ಜೈನೇಶ ಪ್ರಸಾದ, ಉಮಾಕಾಂತ ಮಹಾಜನ್, ರಮೇಶ ಪಾಟೀಲ, ಭಗವಾನ ಬಿರಾದಾರ, ಬಸವರಾಜ, ಹಣಮಂತ ಜಿ, ನಿಜಾಮುದ್ದಿನ್, ಗುಣವಾನ್ ಪಾಟೀಲ ಉಪಸ್ಥಿತರಿದ್ದರು.

ಶ್ರೀಕಾಂತ ಪಾಟೀಲ ಸ್ವಾಗತಿಸಿದರು. ವಿಜಯಕುಮಾರ ನಿರೂಪಿಸಿದರು. ಪ್ರಾಚಾರ್ಯ ಅಶೋಕ ರಾಜೋಳೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT