ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರ ಭವನ: ಶುದ್ಧ ನೀರಿನ ಘಟಕಕ್ಕೆ ಚಾಲನೆ

Last Updated 9 ಸೆಪ್ಟೆಂಬರ್ 2021, 13:59 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದ ಆವರಣದಲ್ಲಿ ನಗರಸಭೆಯಿಂದ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯಾರಂಭಿಸಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಡಾ.ವೈಶಾಲಿ ಘಟಕಕ್ಕೆ ಚಾಲನೆ ನೀಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ನಗರಸಭೆ ವತಿಯಿಂದ ₹ 11 ಲಕ್ಷ ವೆಚ್ಚದಲ್ಲಿ 1,000 ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಭವನದಲ್ಲಿ ನಿರಂತರ ಚಟುವಟಿಕೆಗಳು ನಡೆಯುತ್ತವೆ. ಘಟಕದಿಂದ ನೌಕರರಿಗೆ ಶುದ್ಧ ನೀರು ದೊರಕಲಿದೆ. ಸುತ್ತಮುತ್ತಲಿನ ಜನರೂ ಇದರ ಪ್ರಯೋಜನ ಪಡೆಯಬಹುದು ಎಂದು ಹೇಳಿದರು.

ಸಂಘದ ನಿರ್ದೇಶಕಿಯರಾದ ಸುಮತಿ ರುದ್ರಾ ಹಾಗೂ ಸಾವಿತ್ರಮ್ಮ ಅವರು ಘಟಕಕ್ಕೆ ಪೂಜೆ ಸಲ್ಲಿಸಿದರು.

ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ರಾಜಶೇಖರ ಮಂಗಲಗಿ, ಹಿರಿಯ ಉಪಾಧ್ಯಕ್ಷ ರಾಜಕುಮಾರ ಹೊಸದೊಡ್ಡಿ, ನಿರ್ದೇಶಕರಾದ ಶಿವರಾಜ ಕಪಲಾಪುರೆ, ಓಂಕಾರ ಮಲ್ಲಿಗೆ, ಪಾಂಡುರಂಗ ಬೆಲ್ದಾರ್, ಸುನೀಲಕುಮಾರ, ಗಣಪತಿ ಜಮಾದಾರ್, ಶ್ರೀಮಂತ ಪಾಟೀಲ, ನಗರಸಭೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜಶೇಖರ ಮಠ, ಸಂಜು ಸೂರ್ಯವಂಶಿ, ದತ್ತಾತ್ರಿ ಪಂಚಾಳ, ಸಂಜು ಬಿರಾದಾರ, ಸಂಕೇತ ಸೂರ್ಯವಂಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT