ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರು ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನ

ಬಸವ ಕಾಯಕ, ದಾಸೋಹ ಫೌಂಡೇಷನ್
Last Updated 11 ಸೆಪ್ಟೆಂಬರ್ 2021, 12:10 IST
ಅಕ್ಷರ ಗಾತ್ರ

ಬೀದರ್: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ಮೂವರು ವಿದ್ಯಾರ್ಥಿನಿಯರಿಗೆ ಬಸವ ಕಾಯಕ, ದಾಸೋಹ ಫೌಂಡೇಷನ್ ತಲಾ ₹ 10 ಸಾವಿರ ಪ್ರೋತ್ಸಾಹ ಧನ ನೀಡಿದೆ.

ಭಾಲ್ಕಿ ತಾಲ್ಲೂಕಿನ ಧನ್ನೂರ(ಎಚ್) ಗ್ರಾಮದಲ್ಲಿ ಉದ್ಯಮಿ ಕಾಶಪ್ಪ ಧನ್ನೂರ ಅವರ ಪ್ರಥಮ ಲಿಂಗೈಕ್ಯ ಸಂಸ್ಮರಣೆ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಫೌಂಡೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಅವರು ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 625 ಅಂಕ ಗಳಿಸಿದ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ವಿದ್ಯಾರ್ಥಿನಿಯರಾದ ಪ್ರಕೃತಿ ಸಂಗಶೆಟ್ಟಿ, ವಿನಿತಾ ಸಂಗಶೆಟ್ಟಿ ಹಾಗೂ ಧನ್ನೂರ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನ ಗಳಿಸಿದ ಚಾಮುಂಡೇಶ್ವರಿ ಅವರಿಗೆ ಚೆಕ್ ಹಸ್ತಾಂತರಿಸಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಕಾಶಪ್ಪ ಧನ್ನೂರ ಅವರು ಬಸವತತ್ವದಂತೆ ಬದುಕು ನಡೆಸಿದ್ದರು. ವ್ಯಾಪಾರ, ಕೌಟುಂಬಿಕ ಜೀವನದ ಜತೆಗೆ ಆಧ್ಯಾತ್ಮಿಕ ಶ್ರೀಮಂತಿಕೆ ಬೆಳೆಸಿಕೊಂಡಿದ್ದರು. ಪರೋಪಕಾರದ ಕಾರ್ಯಗಳ ಮೂಲಕ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಹೇಳಿದರು.

ಕಾಶಪ್ಪ ಧನ್ನೂರ ಅವರ ಹಿರಿಯ ಪುತ್ರ ಬಸವರಾಜ ಧನ್ನೂರ ಅವರು ಕೂಡ ತಂದೆ ಹಾಕಿಕೊಟ್ಟ ಮಾರ್ಗದಲ್ಲಿಯೇ ಸಾಗುತ್ತಿದ್ದಾರೆ. ಎಸ್ಸೆಸ್ಸೆಲ್ಸಿ, ಪಿಯುಸಿ, ನೀಟ್‍ನಲ್ಲಿ ಸಾಧನೆಗೈದ, ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಕಲ್ಪಿಸಿ ಪ್ರೋತ್ಸಾಹಿಸುತ್ತಿದ್ದಾರೆ. ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ನುಡಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಗಂಗಾಂಬಿಕೆ ಅಕ್ಕ, ಗುರುಲಿಂಗಯ್ಯ ಸ್ವಾಮಿ ಸಮ್ಮುಖ ವಹಿಸಿದ್ದರು. ರಾಜೇಂದ್ರ ಜೊನ್ನಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬೀದರ್‌ನ ಗಾಂಧಿಗಂಜ್‍ನ ಹಿರಿಯ ವ್ಯಾಪಾರಿ ಕಲ್ಯಾಣಪ್ಪ ಐನಾಪುರ ಷಟ್‍ಸ್ಥಲ ಧ್ವಜಾರೋಹಣ ಮಾಡಿದರು. ಕಲಾವಿದ ಶಿವಕುಮಾರ ಪಾಂಚಾಳ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ರಾಷ್ಟ್ರೀಯ ಬಸವ ದಳ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲ ಪಾಟೀಲ ಖಾಜಾಪುರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವರಾಜ ಹಾಸನಕರ್, ಕಲಬುರ್ಗಿ-ಬೀದರ್-ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಶ್ರೀಕಾಂತ ದಾನಿ, ಮುಖಂಡರಾದ ಗುಂಡೇರಾವ್ ಪಾಟೀಲ, ಕಂಟೆಪ್ಪ ದಾನಪ್ಪ, ಪ್ರೊ. ಎಸ್.ಬಿ. ಬಿರಾದಾರ, ಅಣ್ಣಾರಾವ್ ಮೊಗಶೆಟ್ಟಿ, ಸುವರ್ಣಾ ಬಿ. ಧನ್ನೂರ, ಸ್ಫೂರ್ತಿ ಧನ್ನೂರ, ಮಾಣಿಕಪ್ಪ ಹಾಳೆ, ಬಾಬುರಾವ್ ಪೊಲೀಸ್ ಪಾಟೀಲ ಇದ್ದರು. ಸುರೇಶಕುಮಾರ ಸ್ವಾಮಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT