ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಜನತೆ ಸಂಶೋಧನೆಯಲ್ಲಿ ತೊಡಗಿಕೊಳ್ಳಿ

ವಿಜ್ಞಾನ, ತಂತ್ರಜ್ಞಾನ ಸಮ್ಮೇಳನಕ್ಕೆ ತೆರೆ: ಗುವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಸಲಹೆ
Last Updated 18 ಸೆಪ್ಟೆಂಬರ್ 2022, 14:06 IST
ಅಕ್ಷರ ಗಾತ್ರ

ಬೀದರ್‌: ‘ಯುವಜನತೆ ಆಸಕ್ತಿಯಿಂದ ಸಂಶೋಧನೆಯಲ್ಲಿ ತೊಡಗಿಸಿಕೊಂಡು ವಿಜ್ಞಾನ, ತಂತ್ರಜ್ಞಾನದಲ್ಲಿ ಸಾಧನೆ ಮಾಡಲು ಪ್ರಯತ್ನಿಸಬೇಕು. ಈ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು’ ಎಂದು ಗುಲಬರ್ಗಾ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ ಹೇಳಿದರು.

ನಗರದ ಕರ್ನಾಟಕ ಕಾಲೇಜಿನಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ನಡೆದ ರಾಜ್ಯ ಮಟ್ಟದ ನಾಲ್ಕನೇ ವಿಜ್ಞಾನ ಮತ್ತು ತಂತ್ರಜ್ಞಾನದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಂಶೋಧನೆಗೆ ವಿಫುಲ ಅವಕಾಶಗಳಿವೆ. ಸಣ್ಣ ಸಂಶೋಧನೆ ಮಾಡಿ ತೃಪ್ತಿಪಟ್ಟುಕೊಂಡರೆ ಸಾಲದು ಅದು ನಿರಂತರವಾಗಿ ನಡೆಯಬೇಕು’ ಎಂದರು.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.‌ಕೆ.ಸಿ. ವೀರಣ್ಣ ಮಾತನಾಡಿ,‘ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಆಯೋಜನೆ ಮಾಡಿದ್ದು ಅನುಭವಕ್ಕೆ ಸನಿಹವಾಗಿದೆ. ವಿಜ್ಞಾನಿಗಳು ಮಾಡುವ ಸಂಶೋಧನೆ ಸಾರ್ವಜನಿಕರಿಗೆ ಅನುಕೂಲವಾಗುವಂತಿರಬೇಕು. ಕೇವಲ ಪದವಿಗಾಗಿ ಸಂಶೋಧನೆ ನಡೆಸಿದರೆ ಪ್ರಯೋಜನವಿಲ್ಲ’ ಎಂದರು.

‘ಮೂರು ದಿನಗಳ ಸಮ್ಮೇಳನದಲ್ಲಿ ಆರು ತಾಂತ್ರಿಕ ಅಧಿವೇಶನಗಳು ನಡೆದಿವೆ. ಪರಸ್ಪರ ಜ್ಞಾನ ವಿನಿಮಯವಾಗಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯಬೇಕು’ ಎಂದು ತಿಳಿಸಿದರು.

ಕರಾಶಿ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ಕಾರ್ಯದರ್ಶಿ ಸಿದ್ರಾಮ ಪಾರಾ, ಜ್ಞಾನಸುಧಾ ವಿದ್ಯಾಲಯದ ಅಧ್ಯಕ್ಷೆ ಪೂರ್ಣಿಮಾ ಜಿ, ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ಜಿ. ಮೂಲಿಮನಿ, ಡಾ. ಜಗನ್ನಾಥ ಹೆಬ್ಬಾಳೆ, ಪ್ರೊ. ರಾಜೇಂದ್ರ ಬಿರಾದಾರ ಇದ್ದರು.

ರಾಜ್ಯ ವಿಜ್ಞಾನ, ತಂತ್ರಜ್ಞಾನ ಅಕಾಡೆಮಿಯ ರಾಜ್ಯ ಸಂಯೋಜಕ ಮಹಾದೇವೇಗೌಡ ನಿರೂಪಿಸಿದರು. ಪ್ರಾಚಾರ್ಯ ಎಂ.ಎಸ್.ಚೆಲ್ವಾ, ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT