ಕಮಲನಗರ: ‘ಪಟ್ಟಣದ ಸರ್ಕಾರಿ ಮಾದರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆ ಎಂದು ಉನ್ನತ್ತೀಕರಿಸಲಾಗಿದೆ. ಪ್ರಸಕ್ತ ಸಾಲಿಗೆ ಪಟ್ಟಣದ ಒಂದು ಕಿ.ಮೀ ವ್ಯಾಪ್ತಿಯೊಳಗೆ ಬರುವ ಎಲ್ಲಾ ಸರ್ಕಾರ ಶಾಲೆಗಳು ತಮ್ಮ ಮಕ್ಕಳನ್ನು ಕೆಪಿಎಸ್ ಶಾಲೆಗೆ ಪ್ರವೇಶಾತಿ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆ ರಂಗೇಶ ಅವರು ಸಂಬಂಧಿಸಿದ ಮುಖ್ಯಶಿಕ್ಷಕರಿಗೆ ಸೂಚಿಸಿದರು.

ಪಟ್ಟಣದ ಸರ್ಕಾರಿ ಮಾದರಿ ಶಾಲೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘9 ಮತ್ತು 10 ನೇ ತರಗತಿ ಮಕ್ಕಳ ಪ್ರವೇಶಾತಿಗಾಗಿ ಅಭಿಯಾನ ಆರಂಭಿಸಿ ಹೆಚ್ಚು ಮಕ್ಕಳನ್ನು ಶಾಲೆಗೆ ಸೇರಿಸುವ ಉದ್ದೇಶ ಹೊಂದಲಾಗಿದೆ. ಜೂನ್ ತಿಂಗಳ ಮೊದಲನೆ ವಾರದಲ್ಲಿ ನಿಯೋಜನೆ ಮೇರೆಗೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಇಲಾಖೆ ಆದೇಶ ಹೊರಡಿಸಿದೆ’ ಎಂದರು.

‘ಹೊಳಸಮುದ್ರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸಂಜುಕುಮಾರ ಡೊಂಗರೆ ಅವರನ್ನು ಪ್ರಭಾರ ಮುಖ್ಯಶಿಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಪ್ರವೇಶಾತಿ ನೀಡಿ ಸರ್ಕಾರ ಸೌಲಭ್ಯಗಳನ್ನು ಮತ್ತು ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳಲು ಸಹಕರಿಸಬೇಕು’ ಎಂದರು.

ಈ ವೇಳೆ ಕ್ಷೇತ್ರ ಸಂಪನ್ಮೂಲ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ, ಬಿಆರ್ಸಿ ಶಶಿಕುಮಾರ ಬಿಡವೆ, ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಫಯೂಮ್, ಮುಖ್ಯಶಿಕ್ಷಕ ಶೇಕ ಮಹಮೂದ್, ಶಿಕ್ಷಕ ದಯಾನಂದ ರಾಜೋಳೆ ಇನ್ನಿತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.