ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮಿಗಳ ₹ 68 ಸಾವಿರ ಕೋಟಿ ಸಾಲಮನ್ನಾ: ಅಣದೂರೆ ಖಂಡನೆ

Last Updated 30 ಏಪ್ರಿಲ್ 2022, 12:37 IST
ಅಕ್ಷರ ಗಾತ್ರ

ಬೀದರ್: ‘ಕೇಂದ್ರ ಸರ್ಕಾರ 50 ಉದ್ಯಮಿಗಳ ₹ 68 ಸಾವಿರ ಕೋಟಿ ಸಾಲಮನ್ನಾ ಮಾಡಿರುವುದು ಸರಿಯಲ್ಲ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ ಖಂಡಿಸಿದ್ದಾರೆ.

ವಿಜಯ ಮಲ್ಯ, ಗೀತಾಂಜಲಿ ಗುಟ್ಕಾ, ರಾಮದೇವ ಬಾಬಾರಂಥ ಗಣ್ಯರ ಸಾಲ ಮನ್ನಾ ಮಾಡಿರುವುದು ನಾಚಿಗೇಡು. ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೇಶದ ಬೆನ್ನೆಲುಬು ಆಗಿರುವ ರೈತರನ್ನು ನಿರ್ಲಕ್ಷಿಸುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಬ್ಯಾಂಕುಗಳಿಂದ ಕೋಟ್ಯಂತರ ಸಾಲ ಪಡೆದು ಮುಳುಗಿಸಿ ವಿದೇಶಕ್ಕೆ ಹೋಗಿ ತಲೆ ಮರೆಸಿಕೊಂಡ ಕಳ್ಳರ ಹಾಗೂ ದ್ರೇಶ ದ್ರೋಹಿಗಳಿಗೆ ನೆರವಿಗೆ ನಿಂತಿರುವುದು ಸರಿಯಲ್ಲ. ಆರ್ಥಿಕ ಸಂಕಷ್ಟ ಎದುರಾದಾಗ ಸಾಲ ಪಡೆದು ಪ್ರಾಮಾಣಿಕವಾಗಿ ಮರು ಪಾವತಿ ಪಡೆದವರಿಗೆ ದ್ರೋಹ ಬಗೆದಂತೆ ಆಗಿದೆ ಎಂದು ಟೀಕಿಸಿದ್ದಾರೆ.

ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ದೊರಕುತ್ತಿಲ್ಲ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬಿನ ಬಾಕಿ ಪಾವತಿಸುತ್ತಿಲ್ಲ. ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಬ್ಯಾಂಕುಗಳು ಸಾಲ ಕೊಡಲು ಹಿಂದೇಟು ಹಾಕುತ್ತಿವೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರೇ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಎಲ್ಲ ಬಗೆಯ ಸಾಲ ಮನ್ನಾ ಮಾಡಿ ಕಷ್ಟದ ಸಂದರ್ಭದಲ್ಲಿ ಕೃಷಿಕರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ಸಿದ್ರಾಮಪ್ಪ ಆಣದೂರೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT