ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 11 ರಂದು ಉದ್ಯಮಶೀಲತಾ ಅಭಿವೃದ್ಧಿ ಜಾಗೃತಿ ಶಿಬಿರ

Last Updated 29 ಏಪ್ರಿಲ್ 2022, 12:59 IST
ಅಕ್ಷರ ಗಾತ್ರ

ಬೀದರ್: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ(ಸಿಡಾಕ್) ಕೇಂದ್ರವು ಮೇ 11 ರಂದು ಭಾಲ್ಕಿಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಜಾಗೃತಿ ಶಿಬಿರ ಹಮ್ಮಿಕೊಂಡಿದೆ.

ಶಿಬಿರದಲ್ಲಿ ಸ್ವಂತ ಉದ್ಯಮ ಸ್ಥಾಪನೆಗೆ ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.

ಎಸ್ಸೆಸ್ಸೆಲ್ಸಿ ತೇರ್ಗಡೆಯಾದ 18 ರಿಂದ 40 ವರ್ಷದ ಒಳಗಿನ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಮೇ 5 ರ ಒಳಗೆ ಹೆಸರು ನೋಂದಾಯಿಸಬಹುದು. ಹೆಸರು ನೋಂದಣಿ ಹಾಗೂ ಮಾಹಿತಿಗೆ ಮೊಬೈಲ್ ಸಂಖ್ಯೆ 9743012315/ 7847846784ಗೆ ಸಂಪರ್ಕಿಸಬಹುದು ಎಂದು ಬೀದರ್‍ನ ಸಿಡಾಕ್ ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT