ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಅಸಮತೋಲನ ನಿವಾರಣೆ ಆಗಲಿ: ಈಶ್ವರ ಖಂಡ್ರೆ

ಕಲ್ಯಾಣ ಕರ್ನಾಟಕ ಉತ್ಸವ: ಶಾಸಕ ಈಶ್ವರ ಖಂಡ್ರೆ ಹೇಳಿಕೆ
Last Updated 17 ಸೆಪ್ಟೆಂಬರ್ 2022, 12:33 IST
ಅಕ್ಷರ ಗಾತ್ರ

ಭಾಲ್ಕಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಅಸಮತೋಲನ ಇದ್ದು, ಅದನ್ನು ನಿವಾರಿಸುವ ಕೆಲಸ ಆಗಬೇಕಿದೆ’ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಟೌನ್‍ಹಾಲ್‌ನಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶನಿವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಭಾಗದ ಅಸಮತೋಲನ ನಿವಾರಣೆ ಮತ್ತು ಅಭಿವೃದ್ಧಿಗಾಗಿ ಹಿಂದಿನ ಯುಪಿಎ ಸರ್ಕಾರವಿದ್ದ ಸಂದರ್ಭದಲ್ಲಿ 371(ಜೆ) ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದರಿಂದ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ತಂದಿದ್ದರ ಪರಿಣಾಮ ಈ ಭಾಗದ ವಿದ್ಯಾರ್ಥಿಗಳು, ಯುವಕರು ಎಂಜಿನಿಯರ್, ಡಾಕ್ಟರ್ ಸೇರಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಸುಮಾರು 50 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. ಕ್ಷೇತ್ರದ ಹಾಲಹಳ್ಳಿ ಸ್ನಾತಕೋತ್ತರ ಕಾಲೇಜಿನಲ್ಲಿ 16 ಕೋರ್ಸ್‍ಗಳಿಗೆ ಕೇವಲ ಒಬ್ಬರೇ ಕಾಯಂ ಹುದ್ದೆಯಲ್ಲಿದ್ದಾರೆ. ಹೀಗಾದರೆ ಅಭಿವೃದ್ಧಿ ಆಗಲು ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದರು.

ಗಂಗಾಧರ ಕೋರಿ ಉಪನ್ಯಾಸ ನೀಡಿದರು. ಗುರುಬಸವ ಪಟ್ಟದ್ದೇವರು, ರಾಜೇಶ್ವರ ಶಿವಾಚಾರ್ಯರು, ಚನ್ನಬಸವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದರು. ಪುರಸಭೆ ಅಧ್ಯಕ್ಷ ಅನಿಲ್‌ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್, ಸ್ವತಂತ್ರ ಸೇನಾನಿ ರಾಮರಾವ್‌ ವರವಟ್ಟಿಕರ್, ತಾ.ಪಂ ಇಓ ದೀಪಿಕಾ ನಾಯ್ಕರ್ ಇದ್ದರು.

ತಹಶೀಲ್ದಾರ್‌ ಕೀರ್ತಿ ಚಾಲಕ್ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT