ಬೀದರ್: ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಸರ್ಕಾರದಲ್ಲಿ ಶಾಸಕ ಈಶ್ವರ ಬಿ. ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟು ಪಕ್ಷದ ಚುಕ್ಕಾಣಿ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವರಾಜ ಹಾಸನಕರ್ ಆಗ್ರಹಿಸಿದರು.

ಖಂಡ್ರೆ ಅವರು ಕಾಂಗ್ರೆಸ್ ಪಕ್ಷಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ. ರಾಜ್ಯದಾದ್ಯಂತ ತನ್ನದೇ ಛಾಪು ಮೂಡಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ, ಎರಡು ಸಲ ಸಚಿವರಾಗಿ ಅನೇಕ ಜನಪರ ಕೆಲಸ ಮಾಡಿದ್ದಾರೆ. ಹಾಗೆಯೇ ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭೆಯ ಅಧ್ಯಕ್ಷರಾಗಿಯೂ ಅವರು ಶ್ರಮಿಸುತ್ತಿದ್ದಾರೆ. ಎಲ್ಲ ಜಾತಿ ಜನಾಂಗದ ಜನರಿಗೆ ತಮ್ಮ ಜೊತೆಗೆ ತೆಗೆದುಕೊಂಡು ಹೋಗುವ ಕೆಲಸ ಅವರು ಮಾಡುತ್ತಿದ್ದಾರೆ ಎಂದು ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಾತ್ಯತೀತ ಸಿದ್ಧಾಂತದ ಮೇಲೆ ಅಪಾರವಾದ ನಂಬಿಕೆ ಇಟ್ಟುಕೊಂಡಿರುವ ಖಂಡ್ರೆ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ನ್ಯಾಯ ಕೊಡಿಸುತ್ತಾರೆ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಈಶ್ವರ ಖಂಡ್ರೆ ಅವರನ್ನು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಡಿವಾಳಪ್ಪ ಮಂಗಲಗಿ, ನಿಸಾರ್ ಅಹಮ್ಮದ್, ಗುಂಡೇರಾವ್ ಪಾಟೀಲ್, ಮುಹಮ್ಮದ್ ಖಾನ್, ಮುಸ್ತಾಕ್ ಅಹಮ್ಮದ್, ಪ್ರದೀಪ್ ನಾಟೆಕರ್, ಸೋನು ನಾಗಸೇನ್, ರಾಜಕುಮಾರ್ ಹಾಳೆ, ಮಲ್ಲಿಕಾರ್ಜುನ್ ಹಾಲಹಿಪ್ಪರ್ಗಾ, ರಾಜಕುಮಾರ ನಾಯಕೋಡೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-33-156767590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.