ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯ ತಂದುಕೊಟ್ಟ ಮತದಾರರಿಗೆ ಧನ್ಯವಾದ: ಸಚಿವ ಈಶ್ವರ ಬಿ. ಖಂಡ್ರೆ

Published 5 ಜೂನ್ 2024, 6:37 IST
Last Updated 5 ಜೂನ್ 2024, 6:37 IST
ಅಕ್ಷರ ಗಾತ್ರ

ಬೀದರ್‌: ‘ಕಲ್ಯಾಣ ಕರ್ನಾಟಕದ ಎಲ್ಲ‌ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿರುವುದು ಸಂತಸ ತಂದಿದೆ. ಇದಕ್ಕೆ ಕಾರಣರಾದ ಮತದಾರರಿಗೆ ಧನ್ಯವಾದ ತಿಳಿಸುವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ಫಲಿತಾಂಶದ ನಂತರ ಪತ್ರಕರ್ತರೊಂದಿಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ರಾಜ್ಯದಿಂದ ಜಯ ಸಾಧಿಸಿದ ಎಲ್ಲರಿಗೂ ಅಭಿನಂದನೆ ತಿಳಿಸುವೆ. ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಂದೂಕಾಲು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್‌ಗೆ ಗೆಲುವು ನೀಡಿದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.

ಕಾಂಗ್ರೆಸ್‌ ಅಭ್ಯರ್ಥಿ ಸಾಗರ್ ಖಂಡ್ರೆ ಅವರನ್ನು 18 ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸತ್ ಸದಸ್ಯರೆಂಬ ಹೆಗ್ಗಳಿಕೆಗೆ ಪಾತ್ರರಾಗುವಂತೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದ ಎಲ್ಲ ಮತದಾರರಿಗೆ ಅದರಲ್ಲೂ ಮಾತೆಯರಿಗೆ, ಸೋದರಿಯರಿಗೆ ಮತ್ತು ಯುವ ಮತದಾರರಿಗೆ ನಾನು ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

ಪ್ರಜಾಪ್ರಭುತ್ವದ ಮಹಾ ಹಬ್ಬ ಸಾರ್ವತ್ರಿಕ ಚುನಾವಣೆ ಯಶಸ್ವಿಯಾಗಿ ಪೂರ್ಣವಾಗಲು ಸಹಕರಿಸಿದ ರಾಜ್ಯದ ಎಲ್ಲ ಮತದಾರರಿಗೆ, ಚುನಾವಣಾ ಆಯೋಗಕ್ಕೆ, ಚುನಾವಣಾ ಕಾರ್ಯದಲ್ಲಿ ನಿರತರಾದ ಎಲ್ಲರಿಗೂ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಧನ್ಯವಾದ ಮತ್ತು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT