ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಲ್ಲಿ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ

Published 26 ಜನವರಿ 2024, 4:20 IST
Last Updated 26 ಜನವರಿ 2024, 4:20 IST
ಅಕ್ಷರ ಗಾತ್ರ

ಬೀದರ್: ಗಣರಾಜ್ಯೋತ್ಸವದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಬಳಿಕ ತೆರೆದ ಜೀಪಿನಲ್ಲಿ ತೆರಳಿ, ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಇದಾದ ನಂತರ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಅಕ್ಕ ಪಡೆ, ಅಬಕಾರಿ, ಎನ್.ಸಿ.ಸಿ., ಸೇವಾ ದಳ ಸೇರಿದಂತೆ ಇತರೆ ಇಲಾಖೆಯ ತುಕಡಿಗಳು ಪಾಲ್ಗೊಂಡಿದ್ದವು.

ಪೌರಾಡಳಿತ ಸಚಿವ ರಹೀಂ ಖಾನ್, ಶಾಸಕ ಡಾ. ಶೈಲೇಂದ್್ರ ಕೆ. ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ರಘುನಾಥರಾವ್ ಮಲ್ಕಾಪುರೆ, ನಗರಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಎಸ್ಪಿ ಚನ್ನಬಸವಣ್ಣ‌ಎಸ್.ಎಲ್., ಡಿಸಿಎಫ್ ಎಂ.ಎಂ. ವಾನತಿ, ಜಿಪಂ ಸಿಇಒ ಡಾ. ಗಿರೀಶ ಬದೋಲೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT