ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಕೊಟ್ಟು ಶಾಸಕರ ಖರೀದಿಸುವ ಪರಿಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ: ಸಚಿವ ಖಂಡ್ರೆ

Published 20 ಆಗಸ್ಟ್ 2023, 12:35 IST
Last Updated 20 ಆಗಸ್ಟ್ 2023, 12:35 IST
ಅಕ್ಷರ ಗಾತ್ರ

ಬೀದರ್‌: ‘ಬಿಜೆಪಿಯವರಂತೆ ಹಣ ಕೊಟ್ಟು ಶಾಸಕರ ಖರೀದಿಸುವ ಪರಿಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ. ಯಾರಾದರೂ ಕಾಂಗ್ರೆಸ್‌ ತತ್ವ, ಸಿದ್ದಾಂತ ಒಪ್ಪಿಕೊಂಡು ಬೇಷರತ್‌ ಆಗಿ ಪಕ್ಷಕ್ಕೆ ಬರುವುದಾದರೆ ಅಭ್ಯಂತರವಿಲ್ಲ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯಲ್ಲಿ ಪಾಲ್ಗೊಂಡ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು. 

‘ಕಾಂಗ್ರೆಸ್‌ಗೆ ಆಪರೇಷನ್‌ ಹಸ್ತ ಮಾಡುವ ಅಗತ್ಯವಿಲ್ಲ. ನಮ್ಮ ಪಕ್ಷದ 136 ಜನ ಗೆದ್ದು ಶಾಸಕರಾಗಿದ್ದಾರೆ. ಹೀಗಾಗಿ ಬಿಜೆಪಿಯವರಂತೆ ಹಣ ಕೊಟ್ಟು ಶಾಸಕರ ಖರೀದಿಸುವ ಪರಿಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ’ ಎಂದು ಹೇಳಿದರು.

ಕಾಂಗ್ರೆಸ್‌ಗೆ ರಿರ್ವರ್ಸ್‌ ಆಪರೇಷನ್ ಮಾಡುತ್ತೇವೆ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಹೇಳಿದ್ದಾರೆ. ಅವರಿಗೆ ಜನ ಭಾರಿ ಬಹುಮತದಿಂದ ಗೆಲ್ಲಿಸಿದ್ದಾರಲ್ಲಾ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದೇವೆ. ಇದರಿಂದ ಬಿಜೆಪಿಗೆ ಭಯ, ನಡುಕ ಶುರುವಾಗಿದೆ. ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ನೀಡುತ್ತಿರುವ ಅಸಂಬದ್ಧವಾದ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಸೋತಿದ್ದಾರೆ. ಅಧಿಕಾರ ಕಳೆದುಕೊಂಡಿದ್ದಾರೆ. ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ ಕೂಡ ಏನೇನೋ ಹೇಳುತ್ತಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT