ಬೀದರ್: ‘ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ನೀಡುವ ಯಾವುದೇ ಜವಾಬ್ದಾರಿ ನಿಭಾಯಿಸಲು ಸಿದ್ಧನಿದ್ದೇನೆ’ ಎಂದು ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಈ ಹಿಂದೆ ಪೌರಾಡಳಿತ ಸಚಿವನಾಗಿ ಹಲವು ಸುಧಾರಣೆ ತಂದಿದ್ದೇನೆ. ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ಮತ್ತು ಬಿಜೆಪಿ ಆಡಳಿತ ಇದ್ದಾಗ 5 ವರ್ಷಗಳ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶನಿವಾರ (ಮೇ 30) ಸಂಜೆ ಶಾಸಕಾಂಗ ಪಕ್ಷದ ಸಭೆ ಇದ್ದು, ಬೆಂಗಳೂರಿನಲ್ಲಿರುವಂತೆ ವರಿಷ್ಠರು ತಿಳಿಸಿದ್ದಾರೆ. ಆದಕಾರಣ ಇಲ್ಲೇ ಇದ್ದು, ನಾಳೆ ಸಭೆಯ ಬಳಿಕ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇನೆ. ಪಕ್ಷ ನಿಷ್ಠರು ಮತ್ತು ದಕ್ಷತೆಯಿಂದ ಕೆಲಸ ಮಾಡಿದವರನ್ನು ಕಾಂಗ್ರೆಸ್ ಪಕ್ಷ ಸದಾ ಗುರುತಿಸಿ, ಸ್ಥಾನಮಾನ ನೀಡಿದೆ. ನಾನು ಪ್ರಸ್ತುತ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷನೂ ಆಗಿದ್ದು, ತಮ್ಮ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರಕಬೇಕು. ಹೆಚ್ಚಿನ ಶಾಸಕರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂಬುದು ತಮ್ಮ ಆಶಯ ಎಂದು ಹೇಳಿದ್ದಾರೆ.

ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಕಾಯ, ವಾಚ, ಮನಸಾ ಹಾಗೂ ಶ್ರದ್ಧೆಯಿಂದ ಕೆಲಸ ಮಾಡುತ್ತೇನೆ. ವರಿಷ್ಠರು ಡಿಸಿಎಂ ಹುದ್ದೆ ಬಗ್ಗೆ ನಿರ್ಧರಿಸಿದ್ದಾರೋ ಇಲ್ಲವೋ ತಿಳಿದಿಲ್ಲ. ಆದರೆ, ನಾನು ಕಳೆದ 3 ವರ್ಷಗಳ ಕಾಲ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವನಾಗಿ ಉತ್ತಮ ಕಾರ್ಯ ಮಾಡಿದ್ದೇನೆ. ಇಲಾಖೆಗೆ ಕಾಯಕಲ್ಪ ನೀಡಿದ್ದೇನೆ. ಈ ಹಿಂದೆ ಆಗದ ಹಲವು ಸುಧಾರಣೆ ತಂದ ತೃಪ್ತಿ ನನಗಿದೆ ಎಂದಿದ್ದಾರೆ.

ಪಕ್ಷದ ವರಿಷ್ಠರು, ಸಮಾಜದ ವಿವಿಧ ಸ್ತರಗಳ ಜನರು ಅರಣ್ಯ ಸಚಿವನಾಗಿ ನಾನು ಮಾಡಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನ್ನ ಕಾರ್ಯಶೈಲಿ, ಪಕ್ಷ ನಿಷ್ಠೆ ಮತ್ತು ದಕ್ಷತೆ ಪ್ರಾಮಾಣಿಕತೆಗೆ ಉನ್ನತ ಸ್ಥಾನ ದೊರಕಲಿದೆ. ಪಕ್ಷ ಹೆಚ್ಚಿನ ಜವಾಬ್ದಾರಿ ನೀಡಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಜೊತೆಗೆ ರಾಜ್ಯ ರಾಜಕಾರಣದಲ್ಲೇ ಇದ್ದು ಪಕ್ಷ ಬೆಳೆಸುವುದಾಗಿ ತಿಳಿಸಿದ್ದಾರೆ. ಕಳೆದ 3 ವರ್ಷಗಳಲ್ಲಿ ಅವರು ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿ ಉತ್ತಮವಾಗಿ ಸರ್ಕಾರ ಕೊಟ್ಟಿದ್ದಾರೆ. ಅವರ ಹೆಗಲಿಗೆ ಹೆಗಲು ಕೊಟ್ಟು ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಗಳಾಗಿ ಉತ್ತಮ ಕಾರ್ಯ ಮಾಡಿದ್ದಾರೆ. ಉಪ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಬಾರಿಸಿದೆ. ನಾನು ಕೂಡ ಉಪ ಚುನಾವಣೆಗಳಲ್ಲಿ ಪಕ್ಷದ ಪರ ಪ್ರಚಾರ ಮಾಡಿದ್ದೇನೆ. ಎಲ್ಲರ ಸಂಘಟಿತ ಪ್ರಯತ್ನದಿಂದ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾನು ಅರಣ್ಯ ಮತ್ತು ಪರಿಸರ ಸಚಿವನಾಗಿ ಮಾಡಿರುವ ಸಾಧನೆಗಳ ಬಗ್ಗೆ ಹೇಳಿದ ಅವರು, 153 ಎಕರೆ ಪ್ರದೇಶದಲ್ಲಿ ಬೃಹತ್ ಉದ್ಯಾನವನ್ನು ವಿಶ್ವಗುರು ಬಸವಣ್ಣನವರ ಹೆಸರಲ್ಲಿ ಬೆಂಗಳೂರಿನಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ವಹಿಸಲಾಗಿದೆ. 12 ಸಾವಿರ ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿ ತೆರವು ಮಾಡಲಾಗಿದೆ. ಸುಮಾರು 15 ಸಾವಿರ ಎಕರೆ ಪ್ರದೇಶವನ್ನು ಹೊಸದಾಗಿ ಅರಣ್ಯ ಎಂದು ಘೋಷಿಸಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಕಮಾಂಡ್ ಸೆಂಟರ್ ಸೇರಿದಂತೆ ಹಲವು ಆಧುನಿಕ ತಂತ್ರಜ್ಞಾನ ಆಧಾರಿತ ಕ್ರಮ ವಹಿಸಲಾಗಿದೆ. ಚಾರಣ, ಮೃಗಾಲಯಗಳಿಗೆ ಸಂಬಂಧಿಸಿದಂತೆ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಪ್ರಮಾಣಿತ ಕಾರ್ಯಾಚರಣೆ ಮಾನದಂಡ ರೂಪಿಸಲಾಗಿದೆ. ಈ ಎಲ್ಲದರ ಬಗ್ಗೆ ತೃಪ್ತಿ ಇದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.