ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೋಂಗಿ ರಾಷ್ಟ್ರಪ್ರೇಮಿಗಳು ಮಾರಕ: ಶಾಸಕ ಖಂಡ್ರೆ ಕಳವಳ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ
Last Updated 27 ಜನವರಿ 2020, 11:27 IST
ಅಕ್ಷರ ಗಾತ್ರ

ಭಾಲ್ಕಿ: ರಾಷ್ಟ್ರೀಯತೆ, ದೇಶಭಕ್ತಿ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಅಭಿವ್ಯಕ್ತಿ, ವಾಕ್ ಸ್ವಾತಂತ್ರ್ಯ ದಮನ ಮಾಡುತ್ತಿದ್ದಾರೆ. ಇಂತವರ ಬಗ್ಗೆ ಯುವಜನತೆ ಎಚ್ಚರವಾಗಿರಬೇಕು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಭಾನುವಾರ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ 71ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ, ತಾಲ್ಲೂಕಿನ ರೈತರಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ, ತಾಲ್ಲೂಕಿನ ಎಲ್ಲೆಡೆ ರಸ್ತೆ, ಪಟ್ಟಣದಲ್ಲಿ ವಿವಿಧ ಸರ್ಕಾರಿ ಶಾಲಾ ಕಾಲೇಜುಗಳ ಕಟ್ಟಡ, ಪುರಭವನ ನಿರ್ಮಾಣ, ಸೇರಿದಂತೆ ಹತ್ತು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ.
ಇನ್ನು ಮುಂದೆಯೂ ವಿವಿಧ ಇಲಾಖೆಗಳಿಂದ ಉತ್ತಮ ಕಾರ್ಯ ಮಾಡುವುದು ಬಾಕಿ ಇದೆ. ಇದಕ್ಕೆಲ್ಲ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ. ಅಧ್ಯಕ್ಷೆ ಮೀರಾಬಾಯಿ ಜನಾರ್ಧನ ಕಣಜೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಾಬುರಾವ್ ಪೊಲೀಸ್ ಪಾಟೀಲ, ಸ್ವಾತಂತ್ರ ಸೇನಾನಿ ರಾಮರಾವ್ ಕುಲಕರ್ಣಿ, ಡಿವೈಎಸ್‍ಪಿ ದೇವರಾಜ್.ಬಿ, ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎಸ್. ನಾಯಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯಾ ರುದನೂರ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಾರುತಿರಾವ್ ಮಗರ, ಶಿವಕುಮಾರ ಮೇತ್ರೆ, ಪುರಸಭೆ ಸದಸ್ಯರಾದ ವಿಜಯಕುಮಾರ ರಾಜಭವನ, ಬಸವರಾಜ ವಂಕೆ, ರಾಜಕುಮಾರ ಮೋರೆ, ವಿಜಯಕುಮಾರ ಕಾರಾಮುಂಗೆ,
ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ್ ಮಾಣಿಕಪ್ಪರೇಷ್ಮೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT