ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ನಲ್ಲಿ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪನೆಗೆ ಮನವಿ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಬೇಡಿಕೆ
Last Updated 4 ಸೆಪ್ಟೆಂಬರ್ 2021, 3:53 IST
ಅಕ್ಷರ ಗಾತ್ರ

ಜನವಾಡ: ಕೃಷಿ ಪ್ರಧಾನ ಜಿಲ್ಲೆಯಾಗಿರುವ ಬೀದರ್‌ನಲ್ಲಿ ಕೃಷಿ ಆಧಾರಿತ ಬೃಹತ್ ಕೈಗಾರಿಕೆ ಸ್ಥಾಪಿಸಬೇಕು ಎಂದು ಸಚಿವ ಪ್ರಭು ಚವಾಣ್ ಬೇಡಿಕೆ ಮಂಡಿಸಿದರು.

ಬೀದರ್ ತಾಲ್ಲೂಕಿನ ಆಣದೂರಿ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಸಲ್ಲಿಸಿದರು.

ಬೀದರ್‌ನಲ್ಲಿ ಯಾವುದೇ ರೀತಿಯ ಬೃಹತ್ ಕೈಗಾರಿಕೆಗಳು ಇಲ್ಲದ ಕಾರಣ ಜಿಲ್ಲೆಯ ಯುವಜನರು ಉದ್ಯೋಗಕ್ಕಾಗಿ ಮುಂಬೈ, ಪುಣೆ, ಬೆಂಗಳೂರಿನಂತಹ ನಗರಗಳಿಗೆ ಅಲೆದಾಡಬೇಕಾದ ಅನಿವಾರ್ಯತೆ ಇದೆ ಎಂದು ಮನವರಿಕೆ ಮಾಡಿದರು.

ಜಿಲ್ಲೆಯಲ್ಲಿ ಜೋಳ, ಉದ್ದು, ಹೆಸರು, ಸೋಯಾದಂತಹ ಹಲವು ಪ್ರಮುಖ ಬೆಳೆಗಳನ್ನು ಬೆಳೆಯಲಾಗುತ್ತದೆ. ಈ ಭಾಗದಲ್ಲಿ ಕೃಷಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಹಾಗೂ ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಕೃಷಿ ಇಲಾಖೆಯ ನೆರವಿನ ಅಗತ್ಯವಿದೆ ಹೇಳಿದರು.

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಸಂಶೋಧನಾ ಕೇಂದ್ರ ಮತ್ತು ರೈತರ ತರಬೇತಿ ಕೇಂದ್ರ ಸ್ಥಾಪಿಸಬೇಕು. ಸಾವಯವ ಕೃಷಿಗೆ ಉತ್ತೇಜನ ನೀಡುವ ದಿಸೆಯಲ್ಲಿ ಹೊಸ ಯೋಜನೆ ಎಂದು ಕೋರಿದರು.

ಜಿಲ್ಲೆಯಲ್ಲಿ ಬೃಹತ್ ನೀರಾವರಿ ಯೋಜನೆಗಳು ಇಲ್ಲದೇ ಇರುವುದರಿಂದ ರೈತರು ಹೆಚ್ಚು ವಾಣಿಜ್ಯ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ಬೃಹತ್ ನೀರಾವರಿ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT