ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೈಲರ್‌ ಮಂಡಳಿ ಸ್ಥಾಪನೆಗೆ ಒತ್ತಾಯ

Last Updated 9 ನವೆಂಬರ್ 2020, 16:04 IST
ಅಕ್ಷರ ಗಾತ್ರ

ಬೀದರ್: ಟೈಲರ್ ಹಾಗೂ ಸಹಾಯಕರ ಕಲ್ಯಾಣ ಮಂಡಳಿ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ಟೈಲರ್‌ಗಳು ನಗರದಲ್ಲಿ ಮೆರವಣಿಗೆ ನಡೆಸಿದರು.

ಬಟ್ಟೆ ಹೊಲಿಗೆ ವೃತ್ತಿಯಲ್ಲಿ ತೊಡಗಿದವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು. ಟೈಲರ್ಸ್ ವೃತ್ತಿಯಲ್ಲಿ ತೊಡಗಿಸಿ ಕೊಂಡವರಿಗೆ ಸಾಲ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ಗಾರ್ಮೆಂಟ್ಸ್ ಮತ್ತು ಇತರ ತೈಯಾರಿಕೆ ವಲಯದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳಿಗೆ ಕನಿಷ್ಠ ಸೌಲಭ್ಯಗಳು ದೊರಕುತ್ತಿವೆ. ಮನೆಯಲ್ಲಿ ಹಾಗೂ ಚಿಕ್ಕಪುಟ್ಟ ಅಂಗಡಿಗಳನ್ನು ಇಟ್ಟುಕೊಂಡು ಬದುಕು ನಡೆಸುತ್ತಿರುವ ಕುಟುಂಬಗಳಿಗೆ ಯಾವುದೇ ರೀತಿಯ ಸೌಕರ್ಯಗಳು ದೊರೆಯುತ್ತಿಲ್ಲ ಎಂದು ದೂರಿದರು.

ಜಿಲ್ಲೆಯಲ್ಲಿ 50 ಸಾವಿರ ಜನರು ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಲಾಕ್‌ಡೌನ್‌ ಹಾಗೂ ನಂತರದ ದಿನಗಳಲ್ಲೂ ಕೆಲಸವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಘೋಷಣೆಗಳನ್ನು ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಸಲ್ಲಿಸಿದರು.

ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ಬಾಬುರಾವ್ ಹೊನ್ನಾ, ಜಿಲ್ಲಾ ಘಟಕದ ಸಂಚಾಲಕ ರಾಜು ಕೊಡ್ಡಿಕರ್, ಮಹಿಳಾ ಪ್ರತಿನಿಧಿ ಲಕ್ಷ್ಮಿ ದಂಡಿನ, ಸಮಿಯೋದ್ದೀನ್ ಜಂಬಗಿ, ನಿಜಾಮೋದ್ದೀನ್ ಮನ್ನಾಎಖ್ಖೆಳ್ಳಿ, ಅಹಮ್ಮದ್‌ ಜಂಬಗಿ ಪ್ರತಿಭಟನಾಕಾರರ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT