ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

34 ಮತಗಟ್ಟೆಗಳ ಸ್ಥಾಪನೆ: ರಾಮಚಂದ್ರನ್

ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆ
Last Updated 5 ಅಕ್ಟೋಬರ್ 2020, 15:56 IST
ಅಕ್ಷರ ಗಾತ್ರ

ಬೀದರ್‌: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಗಾಗಿ ಜಿಲ್ಲೆಯಲ್ಲಿ ಒಟ್ಟು 34 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 3,390 ಪುರುಷ ಹಾಗೂ 1,472 ಮಹಿಳಾ ಮತದಾರರು ಸೇರಿ ಒಟ್ಟು 4,862 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ರಾಮಚಂದ್ರನ್ ಆರ್.ತಿಳಿಸಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಅಕ್ಟೋಬರ್ 1ರಂದು ಅಧಿಸೂಚನೆ ಹೊರಡಿಸಲಾಗಿದೆ. ಅ. 8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ. 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ. 12ರಂದು ಹಿಂಪಡೆಯಲು ಕೊನೆಯ ದಿನ. ಅ. 28ಮದದಾನ ನಡೆಯಲಿದೆ. ನ. 2ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಚುನಾವಣೆ ಕೆಲಸಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ವಿಶೇಷವಾಗಿ ಕೋವಿಡ್-19 ರ ನೋಡಲ್ ಅಧಿಕಾರಿಯನ್ನಾಗಿ ಬೀದರ್ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08482-226290ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT