ಬುಧವಾರ, ಜೂಲೈ 8, 2020
21 °C

ಕೊರೊನಾ ಹರಡದಂತೆ ಎಚ್ಚರವಹಿಸಿ: ಶಾಸಕ ರಾಜಶೇಖರ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್‍: ‘ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಪ್ರತಿಯೊಬ್ಬರೂ ಎಚ್ಚರವಹಿಸಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿ ಬಳಿಕ ಮಾತನಾಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆಗೆ ಬರುವ ವರ್ತಕರು, ರೈತರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಮಾಸ್ಕ್ ಧರಿಸಬೇಕು. ಸಾನಿಟೈಸರ್‌ನಿಂದ ಕೈತೊಳೆದುಕೊಳ್ಳಬೇಕು. ವ್ಯಾಪಾರ ಮಾಡುವಾಗ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆಗೆ ಬರುವ ರೈತರು, ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಎಪಿಎಂಸಿ ಅಧಿಕಾರಿಗಳು ಎಚ್ಚರ ವಹಿಸಬೇಕು. ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಸೂಚಿಸಿದರು.

ಕೃಷಿ ಉತ್ಪನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಭದ್ರೇಶ ಶರಣಪ್ಪ ಪಾಟೀಲ, ಉಪಾಧ್ಯಕ್ಷ ಕಾಮಶೆಟ್ಟಿ ಪಾಟೀಲ, ಜಿಲ್ಲಾ ಸಹಾಯಕ ನಿರ್ದೇಶಕ ತುಳಸಿರಾಮ್ ಲಾಖೆ, ಕಾರ್ಯದರ್ಶೀ ಉನ್ನಬಾವಿ ಹಾಗೂ ಹಿರಿಯ ಮುಖಂಡ ಶಿವರಾಜ ಗಂಗಶೆಟ್ಟಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.