ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಯಿನಾಥ, ನಿಕಿತಾಗೆ ಪ್ರಥಮ ಸ್ಥಾನ

ಪರೀಕ್ಷಾ ಪೇ ಚರ್ಚಾ: ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ
Last Updated 28 ಜನವರಿ 2023, 14:19 IST
ಅಕ್ಷರ ಗಾತ್ರ

ಬೀದರ್: ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಅಂಗವಾಗಿ ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೀದರ್‍ನ ಸಿದ್ಧಾರೂಢ ಪಬ್ಲಿಕ್ ಶಾಲೆಯ ಸಾಯಿನಾಥ ಉದಾಲೋಣೆ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಹುಮನಾಬಾದ್‍ನ ಎಸ್.ಜಿ. ಹಿಬಾರೆ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ನಿಕಿತಾ ವಿನೋದ ಡಾಯಿಜೋಡೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬೀದರ್‌ನ ಮೌಲಾನಾ ಆಜಾದ್ ಮಾದರಿ ಶಾಲೆಯ ಶುಗುಫ್ತಾ ಅಂಜುಮ್ ದ್ವಿತೀಯ, ಹಳ್ಳಿಖೇಡ(ಬಿ)ದ ಪ್ರತೀಕ್ ಶಿವಾನಂದ ತೃತೀಯ, ಪ್ರೌಢಶಾಲಾ ವಿಭಾಗದಲ್ಲಿ ಬೀದರ್‍ನ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪಬ್ಲಿಕ್ ಶಾಲೆಯ ರಶ್ಮಿ ನಾಗಶೆಟ್ಟಿ ದ್ವಿತೀಯ ಹಾಗೂ ಹುಮನಾಬಾದ್‍ನ ಎಸ್.ಜಿ. ಹಿಬಾರೆ ಆಂಗ್ಲ ಮಾಧ್ಯಮ ಶಾಲೆಯ ಶಾಹೀನ್ ಸುಲ್ತಾನ್ ಅಹಮ್ಮದ್ ತೃತೀಯ ಸ್ಥಾನ ಪಡೆದಿದ್ದಾರೆ.

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ನಿಮಿತ್ತ ಚಿತ್ರಕಲಾ ಸ್ಪರ್ಧೆಯ ರಾಜ್ಯ ಸಹ ಸಂಯೋಜಕಿ ಡಾ. ಸುಧಾ ಹಲ್ಕಾಯಿ ಅವರ ಮಾರ್ಗದರ್ಶನದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ತಾಲ್ಲೂಕು ಹಾಗೂ ಜಿಲ್ಲಾಮಟ್ಟ ಸೇರಿದಂತೆ ಒಟ್ಟು 200 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಎಂದು ಸ್ಪರ್ಧೆಯ ಜಿಲ್ಲಾ ಸಂಯೋಜಕರೂ ಆದ ಬಿಜೆಪಿ ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಶ್ರೀಕಾಂತ ಮೋದಿ ತಿಳಿಸಿದ್ದಾರೆ.

ಪರೀಕ್ಷೆಗೆ ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಕರು ಹಾಗೂ ಪಾಲಕರು ಯಾವ ರೀತಿ ನೆರವಾಗಬೇಕು. ಪಠ್ಯಕ್ರಮ ಪುನರಾವರ್ತನೆ, ಓದಿನಲ್ಲಿ ಏಕಾಗ್ರತೆ, ಒತ್ತಡಮುಕ್ತಿ, ಆತ್ಮವಿಶ್ವಾಸ ಸೇರಿದಂತೆ ಪರೀಕ್ಷೆಯಲ್ಲಿ ಯಶಸ್ಸು ಗಳಿಸುವ ಬಗೆಯನ್ನು ವಿದ್ಯಾರ್ಥಿಗಳು ಚಿತ್ರಗಳಲ್ಲೇ ಬಿಡಿಸಿದ್ದಾರೆ. ವಿಜೇತರಿಗೆ ಬಹುಮಾನ ರೂಪದಲ್ಲಿ ಪ್ರಧಾನಿ ಮೋದಿ ಅವರು ರಚಿಸಿರುವ ‘ಎಗ್ಝಾಂ ವಾರಿಯರ್ಸ್’ ಕೃತಿ ಹಾಗೂ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT