ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕ ಬರ ಪರಿಹಾರ ಅನುದಾನ: ಮುಖ್ಯಮಂತ್ರಿಗೆ ಮನವಿ

ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಶಾಸಕ ಕಾಶೆಂಪೂರ್ ಹೇಳಿಕೆ
Last Updated 24 ಆಗಸ್ಟ್ 2021, 15:00 IST
ಅಕ್ಷರ ಗಾತ್ರ


ಬೀದರ್: ಬರ ಪರಿಹಾರ ಕಾಮಗಾರಿಗಳಿಗಾಗಿ ಅಧಿಕ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲು ತೀರ್ಮಾನಿಸಲಾಗಿದೆ ಎಂದು ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವರ್ಷ ಬರ ಪರಿಹಾರ ಕಾಮಗಾರಿಗಳಿಗೆ ₹ 30 ಲಕ್ಷ ಅನುದಾನ ಕೊಡಲಾಗಿತ್ತು. ಆದರೆ, ಶಾಸಕರ ಅನುದಾನದಿಂದಲೇ ₹ 1 ಕೋಟಿಯಷ್ಟು ಖರ್ಚು ಮಾಡಲಾಗಿತ್ತು. ಈ ಬಾರಿ₹ 15 ಲಕ್ಷ ಅನುದಾನ ಮಾತ್ರ ಲಭಿಸಿದೆ. ಹೀಗಾದರೆ ಗ್ರಾಮೀಣ ಭಾಗದ ಕುಡಿಯುವ ನೀರಿನ ಬೇಡಿಕೆ ಈಡೇರಿಸುವುದು ಕಷ್ಟವಾಗಲಿದೆ ಎಂದು ಹೇಳಿದರು.

ಈ ಭಾಗದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದ ವಿಶೇಷ ಸೌಲಭ್ಯಗಳು ಇಲ್ಲ. ಬೀದರ್ ನಗರಸಭೆ ವ್ಯಾಪ್ತಿಯ ಹೊರತುಪಡಿಸಿದರೆ ಗ್ರಾಮೀಣ ಪ್ರದೇಶಗಳು ಮಳೆ ನೀರನ್ನೇ ಅವಲಂಬಿಸಿವೆ ಎಂದು ತಿಳಿಸಿದರು.

ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ಅರವಿಂದಕುಮಾರ ಅರಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗದಿಗೆಪ್ಪ ಕುರಿಕೋಟೆ, ಸಹಾಯಕ ನಿರ್ದೇಶಕ ಶರತಕುಮಾರ ಅಭಿಮಾನ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ವಂಗಪಲ್ಲಿ ಇದ್ದರು.

ನಂತರ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸಸಿಗೆ ನೀರೆರೆಯುವ ಮೂಲಕ ಬಂಡೆಪ್ಪ ಕಾಶೆಂಪೂರ್ ಅವರು ರೈತ ಬಂಧು ಅಭಿಯಾನಕ್ಕೆ ಚಾಲನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT