ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವಭಾವಿ ಸಿದ್ಧತಾ ಸಭೆಗೆ ಬಹಿಷ್ಕಾರ

Last Updated 30 ಸೆಪ್ಟೆಂಬರ್ 2022, 12:44 IST
ಅಕ್ಷರ ಗಾತ್ರ

ಬೀದರ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳದ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸದೇ ಇರುವುದನ್ನು ಖಂಡಿಸಿ ಕರ್ನಾಟಕ ಸ್ವಾಭಿಮಾನಿ ಎಸ್.ಸಿ, ಎಸ್.ಟಿ. ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಸಮಿತಿಯ ಪ್ರಮುಖರು ನಗರದಲ್ಲಿ ವಾಲ್ಮೀಕಿ ಜಯಂತಿ ಪೂರ್ವ ಭಾವಿ ಸಿದ್ಧತಾ ಸಭೆಯನ್ನು ಬಹಿಷ್ಕರಿಸಿದರು.

ಅಕ್ಟೋಬರ್ 9 ರಂದು ನಡೆಯುವ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗವಹಿಸಿದ್ದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಸಿದರು.

ಕ್ರಿಯಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮೂಲಭಾರತಿ, ಪ್ರಧಾನ ಕಾರ್ಯದರ್ಶಿ ದರಶಥ ಜಮಾದಾರ್, ಸಂಚಾಲಕರಾದ ಸಂಜುಕುಮಾರ ಮೇದಾ, ಶಿವಕುಮಾರ ನೀಲಕಟ್ಟಿ, ಶ್ರೀಪತರಾವ್ ದೀನೆ, ಕಲ್ಯಾಣರಾವ್ ಭೋಸ್ಲೆ, ಸಂದೀಪ್ ಕಾಂಟೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT