ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಗಾರಿಕಾ ಪ್ರದೇಶ ಸ್ಥಾಪನೆ ಚುರುಕುಗೊಳಿಸಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸೂಚನೆ
Last Updated 20 ನವೆಂಬರ್ 2020, 3:00 IST
ಅಕ್ಷರ ಗಾತ್ರ

ಬೀದರ್: ಔರಾದ್ ತಾಲ್ಲೂಕಿನಲ್ಲಿ ಹೊಸ ಕೈಗಾರಿಕಾ ಪ್ರದೇಶ ಮತ್ತು ವಸಾಹತು ಸ್ಥಾಪನೆ ಪ್ರಕ್ರಿಯೆ ಚುರುಕುಗೊಳಿಸಬೇಕು. ಜಮೀನು ಗುರುತಿಸಿ, ಸರ್ವೇ ಮಾಡುವ ಕಾರ್ಯವನ್ನು ಮುಂದಿನ ಸಭೆಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನಗಳ ಲಭ್ಯತೆ ಬಗ್ಗೆ ವರದಿ ಸಲ್ಲಿಸಬೇಕು. ಹೊಸ ಉದ್ದಿಮೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಬೇಕು ಎಂದು ಕೆಐಎಡಿಬಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಮಟ್ಟದಲ್ಲಿ ಕೈಗಾರಿಕೆ ಸ್ಥಾಪನೆಗೆ ಐದು ಘಟಕಗಳು ಮುಂದೆ ಬಂದಿದ್ದು, ₹25.54 ಕೋಟಿ ಬಂಡವಾಳ ಹೂಡಿಕೆ ಹಾಗೂ 103 ಜನರಿಗೆ ಉದ್ಯೋಗ ಕಲ್ಪಿಸುವ ಅವಕಾಶ ಇದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮುನವಳ್ಳಿ ಮಾಹಿತಿ ನೀಡಿದರು.

ಸ್ಥಾಪನೆಯಾಗಲಿರುವ ಘಟಕಗಳಿಗೆ ಬ್ಯಾಂಕ್ ಸಾಲ, 109 ಕಾಯಿದೆ ಅಡಿ ಕೃಷಿಯೇತರ ಚಟುವಟಿಕೆಗೆ ಭೂ ಪರಿವರ್ತನೆ ಮತ್ತು ಇತರೆ ಇಲಾಖೆಗಳ ಪರವಾನಗಿ ಹಾಗೂ ವಿಶೇಷ ಘಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ 15 ಮಳಿಗೆಗಳ ಹಂಚಿಕೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಬಿ.ಜಿ.ಶೆಟಕಾರ, ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಿವರಾಜ ಹಲಶೆಟ್ಟಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಂ.ಕಮತಗಿ, ಕರ್ನಾಟಕ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧಿಕಾರಿ ಸತ್ಯವ್ರತ, ಕರ್ನಾಟಕ ಕೈಗಾರಿಕಾಭಿವೃದ್ಧಿ ಪ್ರದೇಶ ಮಂಡಳಿಯ ಅಧಿಕಾರಿ ಪ್ರಕಾಶ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ನಾಗಪ್ಪ ರೆಡ್ಡಿ ಹಾಗೂ ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT