ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಭವ ಮಂಟಪ ಕಾಮಗಾರಿ ಆರಂಭಕ್ಕೆ ಆಗ್ರಹ

Last Updated 11 ಜನವರಿ 2022, 11:57 IST
ಅಕ್ಷರ ಗಾತ್ರ

ಬೀದರ್: ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡ ಪರ ಸಂಘಟನೆಗಳ ಒಕ್ಕೂಟ) ಆಗ್ರಹಿಸಿದೆ.

ವೇದಿಕೆಯ ಪದಾಧಿಕಾರಿಗಳು ನಗರದಲ್ಲಿ ನಿಯೋಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನೂತನ ಅನುಭವ ಮಂಟಪಕ್ಕೆ ₹ 200 ಕೋಟಿ ಅನುದಾನ ಒದಗಿಸಿದ್ದಾರೆ. ಆದರೆ, ಮಂಟಪದ ಶಿಲಾನ್ಯಾಸ ನೆರವೇರಿಸಿ ಒಂದು ವರ್ಷ ಕಳೆದರೂ ಕಾಮಗಾರಿ ಪ್ರಾರಂಭಿಸದೇ ಇರುವುದು ವಿಷಾದನೀಯ ಎಂದು ಹೇಳಿದರು.

ಮಂಟಪದ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಮುಕ್ತಾಯಗೊಳಿಸಬೇಕು. ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿ ಆರಂಭಿಸಲು ಸಂಬಂಧಪಟ್ಟವರಿಗೆ ಸೂಚಿಸಬೇಕು. ಕಾಮಗಾರಿಗೆ ಐಎಎಸ್ ಶ್ರೇಣಿಯ ಅಧಿಕಾರಿಯನ್ನು ವಿಶೇಷ ಕರ್ತವ್ಯ ಅಧಿಕಾರಿಯನ್ನಾಗಿ ನೇಮಕ ಮಾಡಬೇಕು ಎಂದು ಬೇಡಿಕೆ ಮಂಡಿಸಿದರು.

ಕಾಮಗಾರಿ ಶುರು ಮಾಡಲು ವಿಳಂಬ ನೀತಿ ಅನುಸರಿಸಿದ್ದಲ್ಲಿ ಬೀದರ್‍ನ ಜಿಲ್ಲಾಧಿಕಾರಿ ಕಚೇರಿ ಎದುರು ಶರಣರು, ಸಾಹಿತಿಗಳೊಂದಿಗೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಹೇಳಿದರು.

ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಭೆಗಳನ್ನು ನಡೆಸಲಾಗಿದೆ. ಕಾಮಗಾರಿ ಶೀಘ್ರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಕಾಮಗಾರಿಗೆ ವಿಶೇಷ ಕರ್ತವ್ಯ ಅಧಿಕಾರಿಯನ್ನು ನೇಮಕ ಮಾಡುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು ಎಂದು ನಿಯೋಗದ ಮುಂದಾಳತ್ವ ವಹಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ತಿಳಿಸಿದರು.

ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಖಾದರ್ ಪಾಷಾ, ನಾಗಪ್ಪ ಜಾನಕನೋರ, ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ ಚಿಟ್ಟೆ, ಉದಯಕುಮಾರ ಅಷ್ಟೂರೆ, ದತ್ತು ಅಲ್ಲಂಕೆರೆ, ಪದಾಧಿಕಾರಿಗಳಾದ ಸೋಮಶೇಖರ ಸಜ್ಜನ್, ಮಲ್ಲಿಕಾರ್ಜುನ ಸಿಕೇನಪುರೆ, ವಿಶ್ವನಾಥ ಗೌಡ, ಸಂತೋಷ ಜೋಳದಾಪಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT