ಶುಕ್ರವಾರ, ಆಗಸ್ಟ್ 12, 2022
27 °C

ಹೆಚ್ಚುವರಿ ಜಮೀನು ಜಲಾವೃತ್ತ: ಪರಿಹಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಾರಂಜಾ ಯೋಜನೆಯಲ್ಲಿ ಸ್ವಾಧೀನಪಡಿಸಿಕೊಳ್ಳದ ಹೆಚ್ಚುವರಿ ಜಮೀನು ಜಲಾವೃತ್ತವಾಗಿರುವ ಕಾರಣ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.

ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ಹಾಗೂ ನಿರ್ದೇಶಕ ವೀರಭದ್ರಪ್ಪ ಉಪ್ಪಿನ್ ಅವರು ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕಾರಂಜಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ಸುಮಾರು 1,200 ಎಕರೆ ಹೆಚ್ಚುವರಿ ಜಮೀನನ್ನು ಇನ್ನೂ ಸ್ವಾಧೀನಪಡಿಸಿಕೊಳ್ಳಲಾಗಿಲ್ಲ. ಈ ಜಮೀನಿನಲ್ಲಿ ಮಳೆ ನೀರು ನಿಲ್ಲುವುದು ಆರಂಭವಾಗಿದೆ. ಬೆಳೆ ಬೆಳೆಯಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ಯೋಜನೆ ಸಂತ್ರಸ್ತರು ಲಾಕ್‍ಡೌನ್ ಪ್ರಯುಕ್ತ ಊರಿಗೆ ಮರಳಿದ್ದಾರೆ. ಅವರಿಗೆ ಮಾಡಲು ಕೆಲಸ ಇಲ್ಲ. ಇರುವ ಅತ್ಯಲ್ಪ ಜಮೀನಿನಲ್ಲೂ ನೀರು ಸಂಗ್ರಹವಾಗಿರುವುದರಿಂದ ಸಂಕಷ್ಟದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು