ಗುರುವಾರ , ಡಿಸೆಂಬರ್ 3, 2020
21 °C
ಅಧಿಕಾರಿಗಳಿಗೆ ಸಂಸದ ಭಗವಂತ ಖೂಬಾ ಸೂಚನೆ

ಬೀದಿ ಬದಿ ವ್ಯಾಪಾರಿಗಳಿಗೆ ಸೌಲಭ್ಯ ಕಲ್ಪಿಸಿ: ಸಂಸದ ಭಗವಂತ ಖೂಬಾ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸಂಸದ ಭಗವಂತ ಖೂಬಾ ಅಧಿಕಾರಿಗಳಿಗೆ ಸೂಚಿಸಿದರು.

ಲೀಡ್ ಬ್ಯಾಂಕ್ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಹಿನ್ನೆಲೆಯಲ್ಲಿ ಬಹಳಷ್ಟು ಬೀದಿ ಬದಿ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೆ ಆರ್ಥಿಕವಾಗಿ ಪುನಃಶ್ಚೇತನ ನೀಡಬೇ ಕಿದೆ. ಸ್ಥಳೀಯ ಸಂಸ್ಥೆಯವರು ನೀಡಿದ ಗುರುತಿನ ಚೀಟಿ ನೋಡಿ ಬ್ಯಾಂಕ್ ಅಧಿ ಕಾರಿಗಳು ಬೀದಿ ಬದಿ ವ್ಯಾಪಾರಿಗಳಿಗೆ ನೆರವು ನೀಡಲು ಮುಂದೆ ಬರಬೇಕು ಎಂದು ನಿರ್ದೇಶನ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಗೆ ಆರ್ಥಿಕ ಅನುಕೂಲ ಕಲ್ಪಿಸುವ ಯೋಜನೆಗಳನ್ನು ರೂಪಿಸಿವೆ. ಅವುಗಳ ಸಮರ್ಪಕ ಅನುಷ್ಠಾನಕ್ಕೆ ಸರ್ಕಾರಿ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಂಸದರು ಆತ್ಮನಿರ್ಭರ್, ಮುದ್ರಾ, ಉದ್ಯೋಗಿನಿ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದರು.

ಇದೇ ವೇಳೇ 2021-22ನೇ ಸಾಲಿನ ಪೊಟೆನ್ಶಿಯಲ್ ಕ್ರೆಡಿಟ್ ಲಿಂಕ್ಡ್ ಪ್ಲ್ಯಾನ್ ಪುಸ್ತಕ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಂ.ಕಮತಗಿ, ಡಿಸಿಸಿ ಬ್ಯಾಂಕ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಮಹಾಜನ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.