ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಆದರ್ಶ ಪಾಲಿಸಿ

ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಅಭಿಮತ
Last Updated 28 ಮಾರ್ಚ್ 2023, 12:33 IST
ಅಕ್ಷರ ಗಾತ್ರ

ಹುಮನಾಬಾದ್: ‘ಮಹರ್ಷಿ ವಾಲ್ಮೀಕಿ ಆದರ್ಶಗಳು ಸಮಾಜಕ್ಕೆ ದಾರಿದೀಪ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಅಭಿ‍ಪ್ರಾಯಪಟ್ಟರು.

ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಟೋಕರಿ ಕೋಳಿ ಸಮಾಜ ಹಾಗೂ ಮಹರ್ಷಿ ವಾಲ್ಮೀಕಿ ದೇವಸ್ಥಾನ ಟ್ರಸ್ಟ್‌ನಿಂದ ಶನಿವಾರ ನಡೆದ ಮಹರ್ಷಿ ವಾಲ್ಮೀಕಿ ಮೂರ್ತಿ ಹಾಗೂ ವೃತ್ತ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಯುವಕರು ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಬಿಎಸ್‍ಎಸ್‍ಕೆ ಅಧ್ಯಕ್ಷ ಸುಭಾಷ ಕಲ್ಲೂರು ಹಾಗೂ ಬಿಜೆಪಿ ಮುಖಂಡ ಡಾ.ಸಿದ್ದು ಪಾಟೀಲ ಮಾತನಾಡಿದರು.

ಶಂಕರಲಿಂಗ ಮಹಾರಾಜರು ಹಾಗೂ ವಿಠಲಪುರದ ಮಾಣಿಕೇಶ್ವರಿ ಆಶ್ರಮದ ಶಾಂತಿ ಬಾಬಾ ಸಾನ್ನಿಧ್ಯ ವಹಿಸಿದ್ದರು.

ಪುರಸಭೆ ಅಧ್ಯಕ್ಷ ನಾಗರಾಜ ಹಿಬಾರೆ, ಪ್ರಮುಖರಾದ ಸೋಮನಾಥ ಪಾಟೀಲ, ಬ್ಯಾಂಕ್ ರೆಡ್ಡಿ, ಸಂತೋಷ ಪಾಟೀಲ, ಟೋಕರಿ ಕೋಳಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಜಮಾದರ, ನೆಹರೂ ಬಾವಗಿ, ರಘು ಜಮಾದಾರ, ನಾಗಭೂಷಣ ಸಂಗಮ್ ಹಾಗೂ ಮಾಣಿಕರಾವ ಕನಕಟ್ಟಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ಸಮಿತಿ ಅಧ್ಯಕ್ಷ ಅರುಣ್ ಪಿ.ಬಾವಗಿ, ರಘು ಜಮಾದಾರ, ನಾಗಶೆಟ್ಟಿ ಬಂಬುಳಗಿ, ರಾಜಶೇಖರ ಜಮಾದಾರ, ಸಿದ್ರಾಮೇಶ್ವರ ಔರಾದಕರ್, ರಾಜಶೇಖರ ಕಾಶೆಂಪುರ, ರಾಜಪ್ಪ ನಿಂಬುರೆ, ಜಯರಾಜ ಸೇಡಂಕರ್ ಹಾಗೂ ಸಂತೋಷ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT