ಬೀದರ್: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಸುಳ್ಳು ಪ್ರಮಾಣ ಪತ್ರ ಪಡೆದುಕೊಂಡವರು ಹಾಗೂ ಪ್ರಮಾಣಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸದ ಜಿಲ್ಲಾಧಿಕಾರಿ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸುಳ್ಳು ಪರಿಶಿಷ್ಟ ಜಾತಿ ಪ್ರಮಾಣಪತ್ರ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

ಸಮಿತಿಯ ಪದಾಧಿಕಾರಿಗಳು ನಗರಕ್ಕೆ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ.

ಬೇಡ ಜಂಗಮ, ಮಾಲ ಜಂಗಮ ಹಾಗೂ ಭೋವಿ ಪದಗಳನ್ನು ದುರುಪಯೋಗ ಪಡೆಸಿಕೊಂಡು ಮೇಲ್ಜಾತಿಯ ಪ್ರಭಾವಿ ವ್ಯಕ್ತಿಗಳು ಪರಿಶಿಷ್ಟ ಜಾತಿಯ ಸುಳ್ಳು ಪ್ರಮಾಣಪತ್ರ ಪಡೆದು ಪರಿಶಿಷ್ಟರ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಹಾಗೂ ಇತರ ಸೌಲಭ್ಯಗಳನ್ನು ಕಬಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ಜಾತಿ ಪ್ರಮಾಣಪತ್ರ ನೀಡುವ ಅಧಿಕಾರಿಗಳು ಕೂಡ ಅಧಿಕಾರದ ದುರುಪಯೋಗ ಮಾಡಿಕೊಂಡಿದ್ದಾರೆ. ಮೇಲ್ಜಾತಿಗೆ ಸೇರಿದ ಭಾಲ್ಕಿಯ ಶಂಭುಲಿಂಗ ಮಲ್ಲಿಕಾರ್ಜುನ ಪರಿಶಿಷ್ಟ ಜಾತಿಯ ಮಾಲ ಜಂಗಮ ಪ್ರಮಾಣಪತ್ರ ಪಡೆದು ಪುರಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ ಎಂದು ಆಪಾದಿಸಿದ್ದಾರೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ನೌಕರಿ ಗಿಟ್ಟಿಸಿದವರು, ರವೀಂದ್ರ ಕಲ್ಲಯ್ಯ ಸ್ವಾಮಿ ಅವರ ಪರವಾಗಿ ಸುಳ್ಳು ಪಂಚನಾಮೆಯಲ್ಲಿ ಹೇಳಿಕೆ ನೀಡಿದವರು, ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕ, ಹಿಂದಿನ ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಮಾಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ, ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಮಿತಿಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಶಿವರಾಜ ತಡಪಳ್ಳಿ, ಅಧ್ಯಕ್ಷ ರಾಜಕುಮಾರ ಮೂಲಭಾರತಿ, ಕಾರ್ಯಾಧ್ಯಕ್ಷ ಅಭಿ ಕಾಳೆ, ಉಪಾಧ್ಯಕ್ಷರಾದ ಉಮೇಶಕುಮಾರ ಸ್ವಾರಳ್ಳಿಕರ್, ರವಿಕುಮಾರ ವಾಘಮಾರೆ, ಚಂದ್ರಕಾಂತ ನಿರಾಟೆ, ಸದಸ್ಯ ಅರುಣ ಪಟೇಲ್ ಹಾಗೂ ಇತರರು ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.