ಶುಕ್ರವಾರ, ಅಕ್ಟೋಬರ್ 22, 2021
29 °C

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ರೈತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ತಾಲ್ಲೂಕಿನ ಕುಮಾರ್‌ಚಿಂಚೋಳಿ ಗ್ರಾಮದ ರೈತರೊಬ್ಬರು ಭಾನುವಾರ ರಾತ್ರಿ 8 ಗಂಟೆ ಸುಮಾರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಿಲ್ (45) ಆತ್ಮಹತ್ಯೆ ಮಾಡಿಕೊಂಡವರು. ಗ್ರಾಮದ ಹೊರವಲಯದಲ್ಲಿ ಅವರ ತಂದೆ ಹೆಸರಿನಲ್ಲಿ 3 ಎಕರೆ ಜಮೀನು ಇದ್ದು, ಅದನ್ನು ಉಳುಮೆ ಮಾಡುತ್ತಿದ್ದರು. ಪಿಕೆಪಿಎಸ್, ಕೆಜಿಬಿ ಹಾಗೂ ಎಸ್‍ಬಿಐ ಬ್ಯಾಂಕ್ ಸೇರಿದಂತೆ ವಿವಿಧೆಡೆ ಒಟ್ಟು ₹2.5 ಲಕ್ಷ ಸಾಲ ಮಾಡಿದ್ದರು. ಹಲವು ವರ್ಷಗಳಿಂದ ನಿರೀಕ್ಷಿತ ಇಳುವರಿ ಬರದ ಕಾರಣ ಸಾಲ ತೀರಿಸಲಾಗಿದೆ ಸಂಕಷ್ಟಕ್ಕೀಡಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಗ್ರಾಮದಲ್ಲಿ ಒಂದು ಪುಟ್ಟ ಹೋಟೆಲ್ ನಡೆಸುತ್ತಿದ್ದರು. ಇತ್ತಿಚೆಗೆ ವ್ಯಾಪಾರ ಸಹ ಸರಿಯಾಗಿ ನಡೆಯುತ್ತಿರಲಿಲ್ಲ. ಇದರಿಂದ ಬಹಳ ನೊಂದಿದ್ದರು ಎಂದು ಮೃತರ ಪತ್ನಿ ವಿಜಯ ಲಕ್ಷ್ಮಿ ತಿಳಿಸಿದ್ದಾರೆ. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಹುಮನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು