ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಟಕಚಿಂಚೋಳಿ: ವಿಷ ಸೇವಿಸಿ ರೈತ ಆತ್ಮಹತ್ಯೆ

Published 11 ಆಗಸ್ಟ್ 2023, 13:48 IST
Last Updated 11 ಆಗಸ್ಟ್ 2023, 13:48 IST
ಅಕ್ಷರ ಗಾತ್ರ

ಖಟಕಚಿಂಚೋಳಿ: ಸಮೀಪದ ಡಾವರಗಾಂವ್ ಗ್ರಾಮದ ರೈತ ಬಾಲಾಜಿ ಬಾಬುರಾವ್ ಕೋಟಗ್ಯಾಳೆ (28) ಸಾಲಬಾಧೆಯಿಂದ ಶುಕ್ರವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷಿಗಾಗಿ ಎಸ್‌ಬಿಐ ಬ್ಯಾಂಕ್ ಸೇರಿದಂತೆ ವಿವಿಧೆಡೆ ಸುಮಾರು ₹2 ಲಕ್ಷ ಸಾಲವಿತ್ತು. ಅಲ್ಲದೇ ಬೇರೆಯವರ ಜಮೀನನ್ನು ವಾರ್ಷಿಕ ಲೆಕ್ಕದಲ್ಲಿ ಹಣ ನೀಡಿ ವ್ಯವಸಾಯ ಮಾಡುತ್ತಿದ್ದರು. ಆದರೆ ಸೂಕ್ತವಾಗಿ ಲಾಭ ಬಾರದಿರುವುದರಿಂದ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ಸಾಲಬಾಧೆಯಿಂದ ಮನನೊಂದು ವಿಷ ಸೇವಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಖಟಕಚಿಂಚೋಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT