ಬೀದರ್: ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಅತಿವೃಷ್ಟಿಯಿಂದಾಗಿ ಸೋಯಾ ಬೆಲೆ ನೀರು ಪಾಲಾಗಿದೆ. ತೊಗರಿ ಬೆಳೆ ಹೂ ಬಿಡುವ ಹಂತದಲ್ಲಿರುವಾಗಲೇ ನಾಶವಾಗಿದೆ. ಗಾಳಿ ಮಳೆಗೆ ಕಬ್ಬು ನೆಲಕ್ಕುರುಳಿ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಶುಂಠಿ, ಟೊಮೆಟೊ, ಬದನೆಕಾಯಿ, ಬೀನ್ಸ್, ಮೆಣಸಿನಕಾಯಿ ಬೆಳೆ ಸಹ ನಾಶವಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಬಿಎಸ್ಎಸ್ಕೆ ಕಾರ್ಖಾನೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಕಬ್ಬು ನುರಿಕೆ ಕಾರ್ಯವನ್ನು ಶುರು ಮಾಡಬೇಕು. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಒಂದು ವಾರದಲ್ಲಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರೈತರ ಹೊಲಗಳಲ್ಲಿನ ಶ್ರೀಗಂಧ ಮರಗಳನ್ನು ಕಡಿದು ಕದ್ದೊಯ್ದ ಕಳ್ಳರನ್ನು ಪತ್ತೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರೈತರಿಗೆ ಪರಿಹಾರವನ್ನು ಕೊಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.