ಬೀದರ್: ‘ಹದಿನೈದು ದಿನಗಳ ಒಳಗೆ ವೈಜ್ಞಾನಿಕ ಪರಿಹಾರ ಕೊಡಬೇಕು. ಇಲ್ಲವಾದಲ್ಲಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲಾಗುವುದು’ ಎಂದು ಕಾರಂಜಾ ಮುಳುಗಡೆ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಕಾರಂಜಾ ಅಣೆಕಟ್ಟೆ ನಿರ್ಮಿಸಿ 35 ವರ್ಷಗಳಾಗಿವೆ. ಜಮೀನು ಕಳೆದುಕೊಂಡ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು 872 ದಿನಗಳಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಹಿಂದಿನ ಹಾಗೂ ಹಾಲಿ ಸರ್ಕಾರ ಭರವಸೆ ಕೊಟ್ಟು ಕಾಲಹರಣ ಮಾಡುತ್ತಿದೆ. ನೂತನ ಸಂಸದ ಸಾಗರ್ ಖಂಡ್ರೆ ಕೂಡ ಆರು ತಿಂಗಳಾದರೂ ಏನೂ ಮಾಡಿಲ್ಲ. ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸಮಸ್ಯೆ ಬಗೆಹರಿಸುತ್ತಿಲ್ಲ. ಇದರಿಂದ ಬೇಸತ್ತು 28 ಹಳ್ಳಿಗಳ ಸಂತ್ರಸ್ತರು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿದ್ದೇವೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರಣಿಯಲ್ಲಿ ಸಮಿತಿ ಕಾರ್ಯದರ್ಶಿ ನಾಗಶೆಟ್ಟಿ ಹಚ್ಚಿ, ನಿರ್ದೇಶಕರಾದ ರಾಜಕುಮಾರ ಕಮಲಪೂರೆ, ಮಾದಪ್ಪಾ ಖೌದೆ, ಸಂಗಾರೆಡ್ಡಿ ಔರಾದ್, ಯೂಸುಫ್ ಮಿಯ್ಯಾ ರೇಕುಳಗಿ, ರಾಜಶೇಖರ ಖೇಣಿರಂಜೋಳ, ಚಂದ್ರಶೇಖರ ಮುತ್ತಣ್ಣಾ, ಲಕ್ಷ್ಮಿಬಾಯಿ ಖೌದೆ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.