ಸೋಮವಾರ, ಸೆಪ್ಟೆಂಬರ್ 21, 2020
22 °C

ಬೆಳಕುಣಿ: ಸುನೀಲ್‌ಗೆ ಯುಪಿಎಸ್ಸಿ ಗರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಮಲನಗರ: ತಾಲ್ಲೂಕಿನ ಬೆಳಕುಣಿ(ಭೋ) ಗ್ರಾಮದ ಸುನೀಲ ರಾಜೇಂದ್ರರಾವ ಸಿಂಧೆ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 812ನೇ ರ‍್ಯಾಂಕ್‌ ಗಳಿಸಿ ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.

ಸುನೀಲ್‌ ಅವರದ್ದು ಸಾಮಾನ್ಯ ರೈತ ಕುಟುಂಬ. ಪ್ರೌಢ ಶಿಕ್ಷಣವನ್ನು ಅಹಮದ್‍ಪುರ್‍, ಪಿಯುಸಿ ಲಾತೂರ್‍ ಹಾಗೂ ಮುಂಬೈನಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ಪೂರ್ಣಗೊಳಿಸಿ ಕ್ಯಾಂಪಸ್ ನೇಮಕಾತಿಯಲ್ಲಿ ಆಯ್ಕೆಯಾಗಿ ಟಿಸಿಎಸ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಆದರೆ ಯುಪಿಎಸ್ಸಿ ಪರೀಕ್ಷೆ ಬರೆಯಬೇಕೆಂಬ ಛಲದಿಂದ ಎರಡು ಬಾರಿ ಪರೀಕ್ಷೆ ಬರೆದಿದ್ದರೂ ಫಲ ಸಿಕ್ಕಿರಲಿಲ್ಲ.

ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಇವರ ಅದ್ಭುತ ಸಾಧನೆಗೆ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು