ಶನಿವಾರ, ಸೆಪ್ಟೆಂಬರ್ 25, 2021
29 °C

ಜನವಾಡ: ಫಸಲ್ ಬಿಮಾ ಯೋಜನೆ ಮಾಹಿತಿ ಕಾರ್ಯಕ್ರಮ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆ.ವಿ.ಕೆ ಕೃಷಿ ಪಾಠಶಾಲೆ ಸರಣಿಯಲ್ಲಿ ಶನಿವಾರ (ಜು.24) ಬೆಳಿಗ್ಗೆ 11ಕ್ಕೆ ರೈತರಿಗೆ ಆನ್‍ಲೈನ್‍ನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಬೆಳೆ ವಿಮೆ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಬೆಂಗಳೂರಿನ ಬೆಳೆ ವಿಮೆ ಯೋಜನೆ ಅಧಿಕಾರಿ ವಿನಯಕುಮಾರ, ಕಲಬುರ್ಗಿಯ ಮಹಮ್ಮದ್ ಮನ್ಸೂರ್ ಶೇಕ್ ಅವರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಸಮಗ್ರ ಮಾಹಿತಿ ನೀಡಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ತಿಳಿಸಿದ್ದಾರೆ.

ಅತಿವೃಷ್ಟಿ, ಅನಾವೃಷ್ಟಿ ಮೊದಲಾದ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಉಂಟಾದಾಗ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ರೈತರ ನೆರವಿಗೆ ಬರಲಿದೆ. ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯೋಜನೆ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸಲಹೆ ಮಾಡಿದ್ದಾರೆ.

ರೈತರು ಗೂಗಲ್ ಮೀಟ್ ಲಿಂಕ್ meet.google.com/rkr-pbvj-psz ಬಳಸಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು