ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಮನಾಬಾದ್: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

Published 6 ಜುಲೈ 2023, 9:54 IST
Last Updated 6 ಜುಲೈ 2023, 9:54 IST
ಅಕ್ಷರ ಗಾತ್ರ

ಹುಮನಾಬಾದ್ (ಬೀದರ್‌ ಜಿಲ್ಲೆ): ತಾಲ್ಲೂಕಿನ ಧುಮ್ಮನಸೂರ್ ಹೊರವಲಯದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ವ್ಯಕ್ತಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.

ಅಂಕುಶ್ ಹುಚ್ಚೇನೂರ್ (28), ಇವರ ಮಗಳು ತನು (6), ಮಗ ಸಾಯಿರಾಜ್ (5) ಮೃತಪಟ್ಟವರು. ಮಕ್ಕಳೊಂದಿಗೆ ತಂದೆ ಧುಮ್ಮನಸೂರ್ ಹೊರವಲಯದ ಸೇಡೋಳ ರಸ್ತೆಯಲ್ಲಿರುವ ಹೊಲದ‌‌ ಭಾವಿಗೆ ಬುಧವಾರ ತಡರಾತ್ರಿ ಹೋಗಿ ಹಾರಿರುವ ಶಂಕೆ ವ್ಯಕ್ತವಾಗಿದೆ.

ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬಂದು, ಮೃತದೇಹಗಳನ್ನು ಮೇಲಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT