ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಸಚಿವ ನಾಗೇಶ್‌ಗೆ ಸನ್ಮಾನ

Last Updated 28 ಅಕ್ಟೋಬರ್ 2021, 3:32 IST
ಅಕ್ಷರ ಗಾತ್ರ

ಭಾಲ್ಕಿ: ‘ಗಡಿ ಭಾಗವನ್ನು ಕರ್ನಾಟಕದಲ್ಲಿ ಉಳಿಸುವಲ್ಲಿ ಮತ್ತು ಕನ್ನಡ ಕಟ್ಟುವಲ್ಲಿ ಹಿರೇಮಠ ಸಂಸ್ಥಾನದ ಕೊಡುಗೆ ದೊಡ್ಡದಿದೆ’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಬುಧವಾರ ಭೇಟಿ ನೀಡಿ, ಉಭಯ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು.

ಡಾ.ಚನ್ನಬಸವ ಪಟ್ಟದ್ದೇವರು ತಮ್ಮ ಜೀವಿತಾವಧಿಯಲ್ಲಿ ಈ ಭಾಗಕ್ಕೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇವೆಗಳ ಜತೆಗೆ ಬಸವತತ್ವ ಪ್ರಚಾರ, ಪ್ರಸಾರ ಮಾಡಿರುವ ಬಗ್ಗೆ ತಿಳಿದುಕೊಂಡಿದ್ದೇನೆ. ಇಂಥ ಮಠಕ್ಕೆ ಬಂದಿರುವುದು ನನ್ನ ಸೌಭಾಗ್ಯ ಎಂದು ತಿಳಿಸಿದರು.

ಬಳಿಕ ಶಿಕ್ಷಣ ಸಚಿವರನ್ನು ಶ್ರೀಮಠದ ಪರವಾಗಿ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಸನ್ಮಾನಿಸಿ, ಬಸವಣ್ಣನವರ ಭಾವಚಿತ್ರ ನೀಡಿ ಗೌರವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT