ಶುಕ್ರವಾರ, ಅಕ್ಟೋಬರ್ 7, 2022
25 °C

ನಿರಂತರ ಓದು ಸಾಧನೆಗೆ ಸಹಕಾರಿ: ಎಸ್.ಕೆ.ಮಸ್ತಾನವಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ಜೀವನದಲ್ಲಿ ಮಹತ್ತರವಾದದ್ದನ್ನು ಸಾಧಿಸಲು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ನಿರಂತರವಾಗಿ ಅಭ್ಯಸಿಸಬೇಕು’ ಎಂದು ಸಂಸ್ಥೆಯ ಅಧ್ಯಕ್ಷ ಎಸ್.ಕೆ.ಮಸ್ತಾನವಲಿ ಹೇಳಿದರು.

ಇಲ್ಲಿಯ ಡೈಮಂಡ್ ಸ್ವತಂತ್ರ ವಿಜ್ಞಾನ ಪಿಯು ಕಾಲೇಜಿನಲ್ಲಿ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 710ನೇ ರ‍್ಯಾಂಕ್‌ ಪಡೆದ ಮಹೇಶ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಿ ಮಾತನಾಡಿದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ನಿರ್ದಿಷ್ಟ ಗುರಿ ಇಟ್ಟುಕೊಂಡು ವಿಷಯಗಳನ್ನು ಆಳವಾಗಿ ಅಭ್ಯಸಿಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಕಾರ್ಯದರ್ಶಿ ವೈ.ಮಾಧವರಾವ್, ಮುಖ್ಯ ಆಡಳಿತಾಧಿಕಾರಿ ಅಶ್ವಿನ ಭೋಸ್ಲೆ, ಆಡಳಿತಾಧಿಕಾರಿ ಗಿರೀಶ ಭಂಡಾರಿ, ಮಂಜುನಾಥ ಜೋಳದಾಪಕೆ ಹಾಗೂ ಜ್ಞಾನೇಶ್ವರ ಬಿರಾದಾರ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು