ಮಂಗಳವಾರ, ಜೂನ್ 28, 2022
21 °C

ಜಿಲ್ಲಾ ಯೋಜನಾಧಿಕಾರಿಯಾಗಿ ದೊಡ್ಡೆ: ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ(ಆರ್‍ಎಂಎಸ್‍ಎ)ದ ನೂತನ ಜಿಲ್ಲಾ ಯೋಜನಾಧಿಕಾರಿ ಡಾ. ಟಿ.ಆರ್. ದೊಡ್ಡೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಇಲ್ಲಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಸನ್ಮಾನಿಸಲಾಯಿತು.

ಶಿಕ್ಷಣ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಡಾ. ಟಿ.ಆರ್. ದೊಡ್ಡೆ ಅವರು, ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆರ್‍ಎಂಎಸ್‍ಎ ಜಿಲ್ಲಾ ಯೋಜನಾಧಿಕಾರಿ ಹುದ್ದೆಯಲ್ಲೂ ಜಿಲ್ಲೆಗೆ ಹೆಸರು ತರುವ ರೀತಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ರಾಜ್ಯ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ವಿಶ್ವಾಸ ವ್ಯಕ್ತಪಡಿಸಿದರು.

ದೊಡ್ಡೆ ಅವರು ದಕ್ಷ ಅಧಿಕಾರಿಯಾಗಿದ್ದಾರೆ. ಜಿಲ್ಲೆಯ ಶೈಕ್ಷಣಿಕ ಸಮಸ್ಯೆಗಳಿಗೆ ಸ್ಪಂದಿಸುತ್ತ ಬಂದಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ಬಿ. ಸೂರ್ಯವಂಶಿ ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ಡೊಂಬಾಳೆ, ಅನುದಾನಿತ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಯಾನಂದ ಮಮದೆ, ಖಜಾಂಚಿ ಸಂಜಯ್ ಬಿರಾದಾರ, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಕುಮಾರ ಕಪ್ಪರಗಾಂವ್, ಪ್ರಧಾನ ಕಾರ್ಯದರ್ಶಿ ಶಿವಾಜಿ ಪಾಟೀಲ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗನಾಥ ದುಬಲಗುಂಡೆ, ಭಾಲ್ಕಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರೋಹಿದಾಸ್ ರಾಠೋಡ್, ಶಿಕ್ಷಣ ಸಂಯೋಜಕರಾದ ಸಚ್ಚಿದಾನಂದ, ರಾಮಬಾನ್, ಶೇಕ್ ನವಾಜ್ ಪಟೇಲ್, ಜಿಲ್ಲಾ ಲೆಕ್ಕ ಪರಿಶೋಧಕ ವಿಜಯಕುಮಾರ ಮಹೀಂದ್ರಕರ್, ಫಕೀರ್ ಪಾಶಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.