ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಿರಂತರ ಪರಿಶ್ರಮವೇ ಸಾಧನೆಗೆ ಸಹಕಾರಿ’

Published 13 ಏಪ್ರಿಲ್ 2024, 16:04 IST
Last Updated 13 ಏಪ್ರಿಲ್ 2024, 16:04 IST
ಅಕ್ಷರ ಗಾತ್ರ

ಭಾಲ್ಕಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ನಿರಂತರವಾಗಿ ಅಭ್ಯಾಸ ಮಾಡಿದಲ್ಲಿ ಮಹೋನ್ನತ ಸಾಧನೆ ಮಾಡಲು ಸಾಧ್ಯ’ ಎಂದು ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಖಂಡ್ರೆ ಹೇಳಿದರು.

ಇಲ್ಲಿನ ಗುರು ಪ್ರಸನ್ನ ಜನಸೇವಾ ಮಹಿಳಾ ಸಂಸ್ಥೆಯಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗುರು ಪ್ರಸನ್ನ ವಾಣಿಜ್ಯ ಪಿಯು ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಹೆತ್ತವರ ಕನಸು ನನಸಾಗಿಸಲು ಹಾಗೂ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಲು ಸಮಯ ಪರಿಪಾಲನೆ ಯೊಂದಿಗೆ ವಿಷಯಗಳನ್ನು ಆಳವಾಗಿ ಅಭ್ಯಸಿಸಬೇಕು ಎಂದು ತಿಳಿಸಿದರು.

‘ನಮ್ಮ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ದಿಗಂಬರ ಪಿಯು ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ 92ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಎಲ್ಲ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಎತ್ತರದ ಸಾಧನೆ ಮಾಡಬೇಕು ಎಂದು ತಿಳಿ ಹೇಳಿದರು.

ಆಡಳಿತಾಧಿಕಾರಿ ಬಾಲರಾಜ ಶಿವನಣಗೆ, ಪದವಿ ಕಾಲೇಜಿನ ಪ್ರಾಚಾರ್ಯ ವಿಷ್ಣು ಕೋಟೆ, ಪಿಯು ಕಾಲೇಜಿನ ಪ್ರಾಚಾರ್ಯ ರಾಜ ಮೇತ್ರಿ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT