ಶುಕ್ರವಾರ, ಸೆಪ್ಟೆಂಬರ್ 17, 2021
21 °C

ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೀದರ್: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಇಲ್ಲಿಯ ಗುರುನಾನಕ ಪಬ್ಲಿಕ್ ಸ್ಕೂಲ್‍ನಲ್ಲಿ ಶನಿವಾರ ಸನ್ಮಾನಿಸಲಾಯಿತು.

ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ ಓಂಪ್ರಕಾಶ ದಿಲೀಪಕುಮಾರ, ವೈಷ್ಣವಿ ಧನ್ನೂರೆ, ಭಂಡಾರಿ ಶ್ರೇಯಾ, ಅಭಿಷೇಕಕುಮಾರ ವಿನೋದ ಪ್ರಕಾಶ, ತಾರಿನಿ ವರ್ಮಾ, ಅನುಪಮಾ ಧನರಾಜ, ಸಾಗರ್ ಪಾಲ್, ಓಂ ಶಿವರಾಜ ಅವರನ್ನು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಶಾಲು ಹೊದಿಸಿ ಸನ್ಮಾನಿಸಿದರು.

ಆಡಳಿತ ಮಂಡಳಿ ಮಾರ್ಗದರ್ಶನ, ಉಪನ್ಯಾಸಕರ ಪರಿಣಾಮಕಾರಿ ಬೋಧನೆ, ಪಾಲಕರ ಸಹಕಾರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.

ಪ್ರಾಚಾರ್ಯ ಎನ್. ರಾಜು, ಪವನಾಪ್ರಿಯಾ, ಮುಖ್ಯಶಿಕ್ಷಕಿ ಆರೀಫ್ ಹಾದಿ, ಪದವಿಪೂರ್ವ ಕಾಲೇಜು ಪ್ರಾಚಾರ್ಯೆ ಅಪರಂಜಿನಿ, ಆಡಳಿತಾಧಿಕಾರಿ ಜಯಪ್ರಕಾಶ ಸ್ಯಾಮುವೆಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.