ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ಕಂಬಕ್ಕೆ ವಾಹನ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

Published 2 ಮೇ 2024, 12:59 IST
Last Updated 2 ಮೇ 2024, 12:59 IST
ಅಕ್ಷರ ಗಾತ್ರ

ಬೀದರ್‌: ನಿಯಂತ್ರಣ ತಪ್ಪಿದ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಟ್ನಳ್ಳಿ ಸಮೀಪದ ಸೌರಶಕ್ತಿ ಘಟಕದ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದೆ.

ಘಟನೆಯಲ್ಲಿ ಯಾಕತಪುರ ಗ್ರಾಮದ ಪ್ರದೀಪ್ ಶಂಕರ ಕೋಳಿ (25), ಚಾಂಗಲೇರಾದ ವಿನೋದಕುಮಾರ ಪ್ರಭು (25) ಹಾಗೂ ವರ್ದಿಶ್ ಶಂಕರ ಬೇಡರ್ (25) ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡ ಚಾಂಗಲೇರಾದ ಸಂಜುಕುಮಾರ ತುಕಾರಾಮ ಬೆನಕೆಪಳ್ಳಿ (26) ಹಾಗೂ ಮಂಜುಕುಮಾರ ತುಕಾರಾಮ ಬೆನಕೆಪಳ್ಳಿ (19) ಅವರನ್ನು ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಾಕತಪುರದಿಂದ ಚಾಂಗಲೇರಾಕ್ಕೆ ಹೊರಟಿದ್ದ ವಾಹನದಲ್ಲಿ ಐವರು ಸಂಚರಿಸುತ್ತಿದ್ದರು. ಚಾಲಕನಿಗೆ ನಿದ್ರೆ ಆವರಿಸಿದ್ದರಿಂದ ವಾಹನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಪಿಎಸ್‍ಐ ಸುಕಾನಂದ ಸಿಂಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮನ್ನಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT