ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಡಾ.ಫ.ಗು.ಹಳಕಟ್ಟಿ ಕೊಡುಗೆ ಅಪಾರ’

Last Updated 3 ಜುಲೈ 2022, 2:17 IST
ಅಕ್ಷರ ಗಾತ್ರ

ಭಾಲ್ಕಿ: ವಚನ ಸಾಹಿತ್ಯ ರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಕೊಡುಗೆ ಅಪಾರವಾಗಿದೆ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಚಯದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಾದಿ ಶರಣರ ವಚನಗಳನ್ನು ಆಧುನಿಕ ಕಾಲದಲ್ಲಿ ಜನಮನಕ್ಕೆ ತಲುಪಿಸಿದ ಕೀರ್ತಿ ಡಾ.ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಹಳಕಟ್ಟಿ ಅವರು ಸಮರ್ಪಣಾ ಭಾವದಿಂದ ವಚನ ಸಾಹಿತ್ಯ, ಸಂಶೋಧನೆ, ಸಂಪಾದನೆ ಕೈಗೊಂಡಿದ್ದರಿಂದಲೇ ಇಂದು ನಮಗೆ ವಚನ ಸಾಹಿತ್ಯ ದೊರೆತಿದೆ. ಬಹು ಕಷ್ಟದ ಕಾಲದಲ್ಲಿ ಯಾವುದೇ ಸೌಲಭ್ಯಗಳನ್ನು ಇಲ್ಲದ ಸಮಯದಲ್ಲಿ ಹಳಕಟ್ಟಿ ಅವರು ವಚನ ಸಾಹಿತ್ಯ ಸಂರಕ್ಷಣೆಗಾಗಿ ಮಾಡಿರುವ ಸೇವೆ ಅನುಪಮವಾದದ್ದು ಎಂದು ತಿಳಿಸಿದರು.

ಆಡಳಿತಾಧಿಕಾರಿ ಮೋಹನರೆಡ್ಡಿ, ಜಯಕ್ಕ ಗಾಂವಕರ, ಸಂತೋಷ ಪಟ್ನೆ, ರುದ್ರಾಕ್ಷಿ ಪಟ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT