ಭಾಲ್ಕಿ: ತಾಲ್ಲೂಕಿನ ಅಂಬೇಸಾಂಗವಿ ಕ್ರಾಸ್ ಬಳಿ ಪೊಲೀಸರು ಮಂಗಳವಾರ 57.6 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಕಾರು ವಶಪಡಿಸಿಕೊಳ್ಳಲಾಗಿದೆ.
‘ಗಾಂಜಾದ ಮೌಲ್ಯ ₹7.20 ಲಕ್ಷ. ಅದನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಸಾಗಿಸಲಾಗುತ್ತಿತ್ತು. ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೂವರು ಆರೋಪಿಗಳು ತಪ್ಪಿಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಲಂಗೋಟಿ ಅವರು ತಿಳಿಸಿದರು.
ಅಕ್ರಮಗಳು ಸಾರ್ವಜನಿಕರ ಗಮನಕ್ಕೆ ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಹೇಳಿದರು.
ಕಾರ್ಯಾಚರಣೆಯಲ್ಲಿ ಭಾಗ ವಹಿಸಿದ್ದ ಗ್ರಾಮೀಣ ಠಾಣೆಯ ಪಿಎಸ್‍ಐ ಚೇತನಕುಮಾರ, ಸಿಬ್ಬಂದಿ ರಾಜೇಂದ್ರ, ಮಹೇಂದ್ರ, ಪ್ರದೀಪ್, ಮಲ್ಲಿಕಾರ್ಜುನ, ಸುಧಾಮ, ಹಣಮಂತ ಹಾಗೂ ಅನಿಲ್ ಅವರನ್ನು ಅಭಿನಂದಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ, ಡಿವೈಎಸ್ಪಿ ಪೃಥ್ವಿಕ್ ಶಂಕರ್ ಹಾಗೂ ಸಿಪಿಐ ಗುರುಪಾದ ಎಸ್.ಬಿರಾದಾರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.